Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೋದಿ ಸಂಚಾರ ಮಾರ್ಗದ ಬಳಿ ಜಿಲೆಟಿನ್ ಕಡ್ಡಿ ಪತ್ತೆ: ಬೆಂಗಳೂರಿನಲ್ಲಿ ಹೈ ಅಲರ್ಟ್

---Advertisement---

ಪ್ರಧಾನಿ ನರೇಂದ್ರ ಮೋದಿ  ಅವರ ಬೆಂಗಳೂರು ಭೇಟಿಯ ವೇಳೆ ಭದ್ರತಾ ಸಿಬ್ಬಂದಿಯನ್ನು ಬೆಚ್ಚಿಬೀಳಿಸಿದ ಘಟನೆ ನಡೆದಿದೆ. ಪ್ರಧಾನಿ ಸಂಚರಿಸುವ ಮಾರ್ಗದ ಸಮೀಪದ ತಾತಗುಣಿಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ನಗರದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಪ್ರಕರಣ ಸಂಬಂಧ ಓರ್ವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರು ಹೊರವಲಯದ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ತಾತಗುಣಿ ಬಳಿ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಈ ಪ್ರದೇಶ ಪ್ರಧಾನಿ ಮೋದಿ ಅವರ ಸಂಚಾರ ಮಾರ್ಗದ ಸಮೀಪದಲ್ಲೇ ಇರುವುದರಿಂದ ಭದ್ರತಾ ಸಂಸ್ಥೆಗಳು ಹೈ ಅಲರ್ಟ್ ಘೋಷಿಸಿವೆ. ಪ್ರಧಾನಿ ಆಗಮನಕ್ಕೂ ಮುನ್ನ ಆಂಟಿ ಸಬೋಟಾಜ್ ಚೆಕ್ (ಎಎಸ್ಸಿ) ತಂಡ ರಸ್ತೆ ಸ್ಯಾನಿಟೈಸ್ ಮಾಡುತ್ತಿದ್ದ ವೇಳೆ, ರಸ್ತೆಯಿಂದ ಸುಮಾರು 50 ಮೀಟರ್ ದೂರದ ಸೇತುವೆ ಪಕ್ಕದ ಕಾಂಪೌಂಡ್ ಬಳಿ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಜಾನೆ ಕೋರಮಂಗಲ ಪೊಲೀಸರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, “ಹೆಚ್‌ಎಎಲ್ ಹಾಗೂ ಆರ್ಟ್ ಆಫ್ ಲಿವಿಂಗ್ ಬಳಿ ಸ್ಫೋಟಿಸುತ್ತೇನೆ” ಎಂದು ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಮಾಹಿತಿ ಪಡೆದ ತಕ್ಷಣ ಬೆಂಗಳೂರು ಪೊಲೀಸರು ರಾಮನಗರ ಭಾಗದ ಪೊಲೀಸರೊಂದಿಗೆ ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸಿದರು. ಹೆಚ್‌ಎಎಲ್ ಬಳಿ ಯಾವುದೇ ಅನುಮಾನಾಸ್ಪದ ವಸ್ತುಗಳು ಸಿಗದಿದ್ದರೂ, ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ ಆಶ್ರಮದ ಹೊರಭಾಗದಲ್ಲಿ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ.

ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಕೋರಮಂಗಲ ಸಮೀಪದ ಮನೆಯಿಂದ ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಈತ ಈ ಹಿಂದೆಯೂ ವಿಐಪಿಗಳ ಭೇಟಿ ಸಂದರ್ಭಗಳಲ್ಲಿ ಇದೇ ರೀತಿ ಹುಸಿ ಬಾಂಬ್ ಕರೆಗಳನ್ನು ಮಾಡುತ್ತಿದ್ದ ಎಂಬ ಮಾಹಿತಿ ಬಹಿರಂಗವಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಈತನ ಮಾನಸಿಕ ಸ್ಥಿತಿ ಸರಿಯಿಲ್ಲ ಎಂಬ ಕಾರಣಕ್ಕೆ ಹಿಂದಿನ ಪ್ರಕರಣಗಳಲ್ಲಿ ಎಚ್ಚರಿಕೆ ನೀಡಿ ಬಿಟ್ಟುಕಳುಹಿಸಲಾಗಿತ್ತು. ಆದರೆ ಈ ಬಾರಿ ಕೇವಲ ಕರೆ ಮಾಡದೇ ಜಿಲೆಟಿನ್ ಕಡ್ಡಿಗಳನ್ನು ಎಸೆದಿರುವುದು ಪ್ರಕರಣವನ್ನು ಗಂಭೀರಗೊಳಿಸಿದೆ. ನಿಜವಾಗಿಯೂ ಆತನೇ ಸ್ಫೋಟಕ ವಸ್ತುಗಳನ್ನು ಇಟ್ಟಿದ್ದಾನೆಯೇ ಅಥವಾ ಇದರ ಹಿಂದೆ ಮತ್ತಾರಾದರೂ ಇದ್ದಾರೆಯೇ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕೇಂದ್ರ ವಲಯದ ಡಿಐಜಿ ಗಿರೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, “ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವುದು ನಿಜ. ಬೆದರಿಕೆ ಕರೆ ಹಾಗೂ ಸ್ಫೋಟಕಗಳ ನಡುವಿನ ಸಂಬಂಧದ ಬಗ್ಗೆ ತನಿಖೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.ಸದ್ಯ ಪತ್ತೆಯಾದ ಜಿಲೆಟಿನ್ ಕಡ್ಡಿಗಳನ್ನು ಸುರಕ್ಷಿತವಾಗಿ ವಿಲೇವಾರಿ ಮಾಡಲಾಗಿದ್ದು, ಪ್ರಧಾನಿ ಭೇಟಿಯ ಹಿನ್ನೆಲೆ ಬೆಂಗಳೂರಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಇಂದು ಹಿರಿಯೂರಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ : ಪ್ರಜಾಸೇವೆ ಅಭಿಯಾನಕ್ಕೆ ಚಾಲನೆ

ಚಿತ್ರದುರ್ಗದಲ್ಲಿ ಗಮನಸೆಳೆದ ಪರಿಸರ ಸ್ನೇಹಿ ಗೃಹಪ್ರವೇಶ : ಪ್ಲಾಸ್ಟಿಕ್ ಮುಕ್ತ ನೈಸರ್ಗಿಕ ಸಂಭ್ರಮಕ್ಕೆ ಸಜ್ಜಾದ ‘ಕಲ್ಪಶ್ರೀ ನಿಲಯ’

ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಹಿಸುದ್ದಿ: 1ರಿಂದ 12ನೇ ತರಗತಿವರೆಗೆ ಉಚಿತ ನೋಟ್‌ಬುಕ್ ವಿತರಣೆ

Chanakya Niti: Offering counsel or advice to such people will only result in a loss for you!

ಚಾಣಕ್ಯ ನೀತಿ: ಜೀವನದಲ್ಲಿ ಇಂತಹ ಬಂಧುಗಳಿಂದ ಸದಾ ಅಂತರ ಕಾಯ್ದುಕೊಳ್ಳಿ!

ಜಾತಕದಲ್ಲಿ ಶುಕ್ರ ದುರ್ಬಲನಾಗಿದ್ದರೆ ಏನಾಗುತ್ತದೆ? ವೈವಾಹಿಕ ಜೀವನದಿಂದ ಆರ್ಥಿಕ ಸ್ಥಿತಿವರೆಗೆ ಉಂಟಾಗುವ ಸಮಸ್ಯೆಗೆ ಇಲ್ಲಿದೆ ಪರಿಹಾರ

ತಿರುಪತಿ ತಿಮ್ಮಪ್ಪನಿಗೆ ಭಕ್ತರು ಮುಡಿ ಅರ್ಪಿಸುವುದೇಕೆ? ನೀಲಾದೇವಿಯ ಕಥೆಯಿಂದ ಕುಬೇರನ ಸಾಲದವರೆಗೆ ಇದೆ ಕುತೂಹಲಕಾರಿ ಹಿನ್ನೆಲೆ!