ಸೋನಿಯಾ ಗಾಂಧಿ ಬರ್ತ್ ಡೇ ಆಚರಿಸಿಕೊಳ್ಳದಿರಲು ನಿರ್ಧಾರ ಯಾಕೆ ಗೊತ್ತಾ..?

ನವದೆಹಲಿ: ಇಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಹುಟ್ಟುಹಬ್ಬ. ಆದ್ರೆ ಇವತ್ತು ಅವರ ಹುಟ್ಟುಹಬ್ಬ ಆಚರಿಅಇದಿರಲು ನಿರ್ಧರಿಸಿದ್ದಾರೆ. ಅಷ್ಟೇ ಅಲ್ಲ ತಮ್ಮ ಪಕ್ಷದ ಎಲ್ಲ ನಾಯಕರಿಗೂ ಯಾರು ಇವತ್ತು ಹುಟ್ಟುಹಬ್ಬ ಆಚರಣೆ ಮಾಡದಿರಲು ಹಾಗೂ ಕಾಂಗ್ರೆಸ್ ನಿಂದ ಯಾವುದೇ ಕಾರ್ಯಕ್ರಮ ಮಾಡದಿರಲು ಸೂಚನೆ ನೀಡಿದ್ದಾರೆ. ಯಾಕಂದ್ರೆ ದೇಶಕ್ಕೆ ಅತಿ ನಷ್ಟವಾದ ದಿನ. ಇಡೀ ದೇಶವೇ ನೋವಿನಲ್ಲಿರುವ ದಿನ. ಸೇನಾ ಮುಖ್ಯಸ್ಥ ಬಿಪಿನ್ ರಾವತ್ ನಿಧನರಾಗಿರುವ ಹಿನ್ನೆಲೆ ಸೋನಿಯಾ ಗಾಂಧಿ ಕೂಡ ತಮ್ಮ ಹುಟ್ಟುಹಬ್ಬ ಆಚರಣೆಯನ್ನ ನಿಲ್ಲಿಸಿದ್ದಾರೆ.

ಈ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ. ಜನರಲ್ ರಾವತ್​ ಮತ್ತು 11 ಯೋಧರ ನಿಧನದ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಸಂಭ್ರಮ ಆಚರಣೆಗಳನ್ನೂ ರದ್ದುಗೊಳಿಸಲು ಸೋನಿಯಾ ಗಾಂಧಿ ನಿರ್ಧರಿಸಿದ್ದಾರೆ. ಇದು ಅವರ ಸೂಕ್ಷ್ಮತೆಗೆ ಸಾಕ್ಷಿ ಎಂದು ಲೋಕಸಭಾ ಸಂಸದ ಮಾಣಿಕ್ಕಮ್ ಟಾಗೋರ್ ಟ್ವೀಟ್ ಮಾಡಿದ್ದಾರೆ.

ನಿನ್ನೆ ಸಂಜೆ ವೇಳೆಗೆ ಬಿಪಿನ್ ರಾವತ್ ಅವರ ಪತ್ನಿ ಮಧುಲಿಕಾ ಸೇರಿದಂತೆ ಸೇನಾಧಿಕಾರಿಗಳಿಂದ ಹೆಲಿಕಾಪ್ಟರ್ ಪತನಗೊಂಡಿತ್ತು. ಬಿಪಿನ್ ರಾವತ್ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದರು ಸಹ ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದರು. ಕೇವಲ 12 ನಿಮಿಷಗಳಲ್ಲಿ ಲ್ಯಾಂಡ್ ಆಗಬೇಕಿದ್ದ ಹೆಲಿಕಾಪ್ಟರ್ ಪತನಗೊಂಡಿತ್ತು.

Share This Article
Leave a Comment

Leave a Reply

Your email address will not be published. Required fields are marked *