Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ವೀರೇಂದ್ರ ಪಪ್ಪಿಯವರಿಗೆ ಸಚಿವ ಸ್ಥಾನ ನೀಡಿ : ಅಭಿಮಾನಿ ಬಳಗ ಒತ್ತಾಯ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ ಮೇ. 27 : ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳು ಬದಲಾವಣೆಯಾಗಿ ಡಿ.ಕೆ ಶಿವಕುಮಾರ್ ರವರು ಮುಖ್ಯಮಂತ್ರಿ ಯಾದಲ್ಲಿ ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಸಚಿವ ಸಂಪುಟವನ್ನು ಪುನರಚನೆ ಮಾಡಿದಲ್ಲಿ ಅವರ ಸಚಿವ ಸಂಪುಟದಲ್ಲಿ ಯುವ ಶಾಸಕರಾದ ಕೆ.ಸಿ. ವೀರೇಂದ್ರ ಪಪ್ಪಿಯವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೆ.ಸಿ. ವೀರೆಂದ್ರ ಪಪ್ಪಿ ಯವರ ಅಭಿಮಾನಿಗಳ ಬಳಗ ಪಕ್ಷದ ವರಿಷ್ಟರನ್ನು ಒತ್ತಾಯಿಸಿದೆ.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ವೀರಶೈವ ಯುವ ವೇದಿಕೆಯ ಅಧ್ಯಕ್ಷ ಹಾಗೂ ಕೆ.ಸಿ.ವಿರೇಂದ್ರ ಪಪ್ಪಿ ಅಭಿಮಾನಿ ಬಳಗದ ಮಂಜು ದಾಳಿಂಬೆ ವೀರೇಂದ್ರ ಪಪ್ಪಿಯವರು ಶಾಸಕರಾಗುವ ಮುಂಚೆ ಚಿತ್ರದುರ್ಗದಲ್ಲಿ ಹಲವಾರು ಸಮಸ್ಯೆಗಳಿದ್ದವು ಅವರು ಶಾಸಕರಾದ ಮೇಲೆ ಸಮರ್ಪಕ ಕುಡಿಯುವ ನೀರು, ರಸ್ತೆ, ಚರಂಡಿ, ರಸ್ತೆ ಅಗಲೀಕರಣ ಹಾಗೂ ಜಿಲ್ಲೆಯ ಜೀವನಾಡಿಯಾದ ಅಪ್ಪರ್ ಭದ್ರಾ ಯೋಜನೆ ಶೀಘ್ರವಾಗಿ ಪೂರ್ಣಗೊಳ್ಳಲು ಯೋಜನೆಯ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗಕ್ಕೆ ಮೆಡಿಕಲ್ ಕಾಲೇಜು ಸ್ಥಾಪನೆಗೆ ಇವರ ಕೂಡುಗೆ ಇದೆ. ಇದಲ್ಲದೇ ಪ್ರತಿದಿನ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಾಗಿ ಬೇಕಾದಂತಹ ಪೂರಕ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದಾರೆ.ಶಾಸಕರಾಗಿ ಇಷ್ಟೊಂದು ಪ್ರಮಾಣದಲ್ಲಿ ಕೆಲಸವನ್ನು ಮಾಡುತ್ತಿದ್ದಾರೆ ಇವರಿಗೆ ಸಚಿವ ಸ್ಥಾನವನ್ನು ನೀಡಿದರೆ ಚಿತ್ರದುರ್ಗ ಜಿಲ್ಲೆ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿಯಾಗಲಿದೆ ಎಂದು ಅಭೀಪ್ರಾಯ ವನ್ನು ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಹಲವಾರು ಹಿರಿಯ ಶಾಸಕರಿದ್ದಾರೆ ಅವರಿಗೂ ಸಹ ಮಂತ್ರಿ ಸ್ಥಾನವನ್ನು ನೀಡಲಿ.ಅವರ ಜೊತೆಗೆ ವೀರೇಂದ್ರ ಪಪ್ಪಿಯವರಿಗೆ ಸಹ ಸಚಿವ ಸ್ಥಾನವನ್ನು ನೀಡಬೇಕು.ಉತ್ತರ ಕರ್ನಾಟಕದ ಭಾಗದಲ್ಲಿ ಒಂದು ಜಿಲ್ಲೆಗೆ ಎರಡರಿಂದ ಮೂರು ಜನರಿಗೆ ಸಚಿವ ಸ್ಥಾನ ನೀಡಲಾಗಿದೆ ಅದೇ ರೀತಿ ಮಧ್ಯ ಕರ್ನಾಟಕದ ಚಿತ್ರದುರ್ಗ ಜಿಲ್ಲೆಗೂ ಸಹ ಮುಂದಿನ ದಿನಗಳಲ್ಲಿ ಎರಡರಿಂದ ಮೂರು ಸಚಿವ ಸ್ಥಾನವನ್ನು ನೀಡಬೇಕು ಎಂದು ಆಗ್ರಹಿಸಿ ಇದರ ಬಗ್ಗೆ ಕಾಂಗ್ರೆಸ್ ಪಕ್ಷದ ವರಿಷ್ಠರ ಗಮನಕ್ಕೆ ತರಲಾಗಿದೆ. ವೀರೇಂದ್ರ ಪಪ್ಪಿಯವರಿಗೆ ಹಣದ ಅವಶ್ಯಕತೆ ಇಲ್ಲ. ಅವರು ಜನಸೇವೆ ಮಾಡಬೇಕೆಂದು ರಾಜಕೀಯಕ್ಕೆ ಬಂದವರು. ಅವರಿಗೆ ಸಚಿವ ಸ್ಥಾನ ನೀಡುವುದರ ಮೂಲಕ ಮತ್ತಷ್ಟು ಬಲವನ್ನು ನೀಡಿದರೆ ಇನ್ನಷ್ಟು ಉತ್ತಮ ಕೆಲಸಗಳು ಅವರಿಂದ ಆಗುವ ಸಾಧ್ಯತೆಯಿದೆ ಎಂದು ಮಂಜುನಾಥ್ ತಿಳಿಸಿದರು.

ಸಿರಾಜ್ ಮಾತನಾಡಿ, ಶಾಸಕರಾದ ಕೆ.ಸಿ.ವಿರೇಂದ್ರ ಪಪ್ಪಿಯವರು ಜಿಲ್ಲೆಯ ಜೀವನಾಡಿಯಾದ ಅಪ್ಪರ್ ಭದ್ರ ಆಯೋಜನೆಯನ್ನು ಪೂರ್ಣಗೂಳಿಸಲು ಬಹಳಷ್ಟು ಶ್ರಮವನ್ನು ಹಾಕುತ್ತಿದ್ದಾರೆ. ಜಿಲ್ಲೆಗೆ ಭದ್ರೆ ಹರಿಯಬೇಕು ಎನ್ನುವುದು ಸಚಿವರಾಗಿದ್ದ ದಿ.ಡಿ.ಸುಧಾಕರ್‍ರವರ ಕನಸಾಗಿತ್ತು ಅದನ್ನು ನನಸು ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಇದ್ದಲ್ಲದೆ ರಸ್ತೆಯ ಆಗಲಿಕರಣಕ್ಕೆ ಮುಂದಾಗಿ ಕಿರಿದಾದ ಚಿತ್ರದುರ್ಗದ ರಸ್ತೆಗಳನ್ನು ಆಗಲ ಮಾಡಲು ಹೊರಟ್ಟಿದ್ದಾರೆ. ಡಿಎಂಎಫ್ ಅನುದಾನದಲ್ಲಿ ವಿವಿಧ ರೀತಿಯ ಕಾಮಗಾರಿಗಳನ್ನು ಮಾಡಿಸಲು ಮುಂದಾಗಿದ್ದಾರೆ. ಇದರಿಂದ ಹಲವಾರು ಜನರಿಗೆ ಅನುಕೂಲವಾಗಲಿದೆ ಎಂದರು.

ಕಾಂಗ್ರೆಸ್ ಓಬಿಸಿ ಅಧ್ಯಕ್ಷ ಎನ್.ಡಿ.ಕುಮಾರ್ ಮಾತನಾಡಿ, ಚಿತ್ರದುರ್ಗ ಕಳೆದ 30 ವರ್ಷಗಳಿಂದ ವಿವಿಧ ರೀತಿಯ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿತ್ತು ಪಪ್ಪಿ ಶಾಸಕರಾದ ಮೇಲೆ ಇವುಗಳನ್ನು ನಿವಾರಣೆ ಮಾಡುವುದರ ಮೂಲಕ ಸೌಲಭ್ಯಗಳನ್ನು ದೂರಕಿಸಿಕೊಟ್ಟಿದ್ದಾರೆ. ಇಂತಹರಿಗೆ ಮಂತ್ರಿ ಸ್ಥಾನವನ್ನು ನೀಡಿದರೆ ಚಿತ್ರದುರ್ಗ ನಗರ ಹಾಗೂ ಜಿಲ್ಲೆ ಅಭೀವೃದ್ದಿಯನ್ನು ಕಾಣಲಿದೆ ಎಂದರು. ಗೋಷ್ಟಿಯಲ್ಲಿ ಕೆಪಿಸಿಸಿಯ ರಾಜ್ಯ ಕಾರ್ಯದರ್ಶಿ ಚಂದ್ರಶೇಖರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now