ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 06 : ಕಾಡುಗೊಲ್ಲರು ವಾಸಿಸುವ ಹಟ್ಟಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತನೆ ಮಾಡಬೇಕು ಹಾಗೂ ಕಾಡುಗೊಲ್ಲ ಜಾತಿ ಪ್ರಮಾಣ ಪತ್ರ ನೀಡಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ ಕಂದಾಯ ಸಚಿವರಿಗೆ ಒತ್ತಾಯಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕಂದಾಯ ವಿಷಯಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಕಂದಾಯ ಸಚಿವರಿಗೆ ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯೆಯಾಗಿ ಮಾತನಾಡಿದ ಸಚಿವರು,
ಕಾಡುಗೊಲ್ಲ ಸಮುದಾಯದ ಜನರಿಗೆ ಕಾಡುಗೊಲ್ಲ ಎಂಬ ಜಾತಿ ಪ್ರಮಾಣ ಪತ್ರವನ್ನು ಪಡೆಯುವಲ್ಲಿ ಎದುರಾಗುತ್ತಿರುವ ತಾಂತ್ರಿಕ ತೊಂದರೆಗಳನ್ನು ನಿವಾರಿಸಿ, ಸುಲಭವಾಗಿ ಪ್ರಮಾಣ ಪತ್ರ ಸಿಗುವಂತಾಗಬೇಕು ಎಂದರು.
ರಾಜ್ಯ ಸರ್ಕಾರವು ಈಗಾಗಲೇ ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದ್ದು, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಮೂಲಕ ಸಮುದಾಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯ ಮತ್ತು ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಆರ್ಥಿಕ ನೆರವು ನೀಡುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ತಿಳಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















