ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 03 : ಚಳ್ಳಕೆರೆ ತಾಲ್ಲೂಕು ಟಿ.ದೇವರಹಳ್ಳಿ ಗ್ರಾಮದಲ್ಲಿ ರೈತರ ಜಮೀನುಗಳಲ್ಲಿ ವಿದ್ಯುತ್ ಹೆಚ್.ವಿ.ಕೇಬಲ್ ಮಾರ್ಗ ಅಳವಡಿಸಿ ಕೆ.ಪಿ.ಟಿ.ಸಿ.ಎಲ್ ಮತ್ತು ಗುತ್ತಿಗೆದಾರರು ಪರಿಹಾರ ನೀಡದೆ ವಂಚಿಸಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.
ರೈತರ ಜಮೀನುಗಳಲ್ಲಿ ದೊಡ್ಡ ಗಾತ್ರದ ಕಂಬಗಳನ್ನು ನೆಟ್ಟಿದ್ದು, 25 ರೈತರಿಗೆ ಅಲ್ಪಸ್ವಲ್ಪ ಪರಿಹಾರ ದೊರಕಿದೆ. ದೊಡ್ಡ ದೊಡ್ಡ ಮರಗಳನ್ನು ಜೆಸಿಬಿಯಿಂದ ನೆಲಸಮಗೊಳಿಸಲಾಗಿದೆ. ಕಂಬಗಳನ್ನು ನೆಟ್ಟಿರುವ ಕಡೆ ಬೆಳೆ ಬೆಳೆಯಲು ಆಗುತ್ತಿಲ್ಲ. ಕೆ.ಪಿ.ಟಿ.ಸಿ.ಎಲ್. ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಸಭೆ ಕರೆದು ಒಂದು ವಾರದೊಳಗೆ ರೈತರಿಗೆ ಪೂರ್ಣ ಪ್ರಮಾಣದ ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ, ಬಸ್ತಿಹಳ್ಳಿ ಜಿ.ಸುರೇಶ್‍ಬಾಬು, ಜಿ.ಟಿ.ಶ್ರೀನಿವಾಸರೆಡ್ಡಿ, ಪಿ.ಶಿವಣ್ಣ, ಜಿ.ನಾರಾಯಣರೆಡ್ಡಿ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















