Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿ.ಟಿ.ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಿ : ಕರ್ನಾಟಕ ರಾಜ್ಯ (ಗೊಲ್ಲ) ಯಾದವರು ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಮೇ. 29 : ವಿಧಾನ ಪರಿಷತ್ ಸದಸ್ಯರು, ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಯಾದವ ಗೊಲ್ಲ, ಸಂಘ ಮತ್ತು ಕರ್ನಾಟಕ ರಾಜ್ಯ ಪ್ರವರ್ಗ 1ರ ಜಾತಿಗಳ ಒಕ್ಕೂಟದ ಅಧ್ಯಕ್ಷರಾದ ಡಿ.ಟಿ.ಶ್ರೀನಿವಾಸ್ ರವರನ್ನು ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಸಚಿವರನ್ನಾಗಿ ಮಾಡುವಂತೆ ಕಾಂಗ್ರೆಸ್ ಪಕ್ಷದ ವರಿಷ್ಟರಲ್ಲಿ ಕರ್ನಾಟಕ ರಾಜ್ಯ (ಗೊಲ್ಲ) ಯಾದವರು ಒತ್ತಾಯಿಸಿದ್ದಾರೆ.

ಚಿತ್ರದುರ್ಗ ನಗರದಲ್ಲಿ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ರಾಜ್ಯ ಗೊಲ್ಲ ಯಾದವ್ ಸಂಘದ ಉಪಾಧ್ಯಕ್ಷರಾದ ಸಿದ್ದಪ್ಪ ಕರ್ನಾಟಕ ರಾಜ್ಯದಲ್ಲಿ ಯಾದವ (ಗೊಲ್ಲ) ಸಮುದಾಯವು ಸುಮಾರು 19.00 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿದ್ದು, ರಾಜಕೀಯವಾಗಿ ಪ್ರಾತಿನಿಧ್ಯ ಇಲ್ಲದಂತಾಗಿದೆ. ಕರ್ನಾಟಕದ ಯಾದವ ಸಮುದಾಯದ ಧೀಮಂತ ನಾಯಕರಾದ ದಿವಂಗತ ಎ.ಕೃಷ್ಣಪ್ಪ ರವರ ನಂತರ ಕರ್ನಾಟಕ ರಾಜ್ಯ ಗೊಲ್ಲ (ಯಾದವ) ಸಂಘದ ನೇತೃತ್ವವನ್ನು ಡಿ.ಟಿ.ಶ್ರೀನಿವಾಸ್ ರವರು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಮುಖಾಂತರ ಆಯ್ಕೆಯಾದ ಮೊದಲ ಅಧ್ಯಕ್ಷರಾಗಿದ್ದು ಮುನ್ನಡೆಸುತ್ತಿದ್ದಾರೆ. ಡಿ.ಟಿ. ಶ್ರೀನಿವಾಸ ರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಅವರ ನೇತೃತ್ವದಲ್ಲಿ ತುಮಕೂರು, ಚಿತ್ರದುರ್ಗ, ಚಿಕ್ಕೋಡಿಗಳಲ್ಲಿ ಕರ್ನಾಟಕ ರಾಜ್ಯ ಗೊಲ್ಲ (ಯಾದವ) ಸಮಾವೇಶಗಳನ್ನು ಮಾಡಿ ಸಮಾಜವನ್ನು ಸಂಘಟನೆ ಮಾಡಿರುತ್ತಾರೆ ಎಂದರು.

2024 ರಲ್ಲಿ ನಡೆದ ಕರ್ನಾಟಕ ಶಿಕ್ಷಕರ ಕ್ಷೇತ್ರದ ಎಂ.ಎಲ್.ಸಿ ಚುನಾವಣೆಯಲ್ಲಿ ಇದುವರೆವಿಗೂ ಕಾಂಗ್ರೆಸ್ ಪಕ್ಷವು ಜಯಸಾಧಿಸದೇ ಇದ್ದು ಇವರು ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ನಮ್ಮ ರಾಜ್ಯದಲ್ಲಿ ಹಿಂದುಳಿದ ಪ್ರವರ್ಗ-1ರ ಜಾತಿಗಳ ಒಕ್ಕೂಟದ ಅಧ್ಯಕ್ಷರಾಗಿ ಸುಮಾರು 95ಕ್ಕೂ ಹೆಚ್ಚು ಅತೀ ಹಿಂದುಳಿದ ಸಮಾಜಗಳನ್ನು ಸಂಘಟಿಸಿ ಅವರನ್ನು ಮುನ್ನೆಲೆಗೆ ತರಲು ಶ್ರಮಿಸುತ್ತಿದ್ದಾರೆ. ಡಿ.ಟಿ.ಶ್ರೀನಿವಾಸ ರವರನ್ನು ಕರ್ನಾಟಕ ರಾಜ್ಯದಲ್ಲಿ ಮುಂಬರುವ ಸಚಿವ ಸಂಪುಟದಲ್ಲಿ ಹಿಂದುಳಿದ ಸಮಾಜಗಳ ಪ್ರತಿನಿಧಿಯಾಗಿ ಸಚಿವ ಸ್ಥಾನ ನೀಡುವಂತೆ ಕರ್ನಾಟಕ ರಾಜ್ಯ (ಗೊಲ್ಲ) ಯಾದವ ಸಮಾಜದಿಂದ ಕಾಂಗ್ರೆಸ್ ಪಕ್ಷದ ವರಿಷ್ಠರಲ್ಲಿ ಮನವಿ ಮಾಡಲಾಯಿತು.

ರಮೇಶ್ ಮಾತನಾಡಿ, ರಾಜಕೀಯ ಪಕ್ಷಗಳು ನಮ್ಮನ್ನು ಮತದಾನಕ್ಕೆ ಮಾತ್ರ ಬಳಕೆ ಮಾಡಲಾಗುತ್ತಿದೆ ಆದರೆ  ಸರ್ಕಾರದಲ್ಲಿ ಸ್ಥಾನಗಳನ್ನು ನೀಡುವಲ್ಲಿ ಮಾತ್ರ ಮೀನಾಮೇಷ ಮಾಡುತ್ತಿದೆ, ಕಳೆದ 30 ವರ್ಷದಿಂದ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಶಿಕ್ಷಕರ ಕ್ಷೇತ್ರವನ್ನು ಗೆದ್ದಿರಲಿಲ್ಲ ಇವರ ಸ್ಪರ್ದೆ ಮಾಡುವುದರ ಮೂಲಕ ಈ ಈ ಕ್ಷೇತ್ರವನ್ನು ಗೆಲ್ಲುವುದರ ಮೂಲಕ ಪಕ್ಷ ಮತ್ತು ಸಮುದಾಯಕ್ಕೆ ಕೀರ್ತಿಯನ್ನು ತಂದಿದ್ದಾರೆ. ಶ್ರೀನಿವಾಸ್ ರವರು ತಮ್ಮ ಸಮುದಾಯ ಮಾತ್ರವಲ್ಲದೆ ಬೇರೆ ಸಮುದಾಯದವರಿಗೆ ನ್ಯಾಯವನ್ನು ಕೊಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ ಎಂದರು.

ಗೋಷ್ಟಿಯಲ್ಲಿ ಹಿರಿಯೂರು ಪುರಸಭೆಯ ಮಾಜಿ ಸದಸ್ಯರಾದ ಬಿ.ಕೆ.ಕರಿಯಪ್ಪ, ಹಿರಿಯೂರು ಗೊಲ್ಲ ಯಾದವ್ ಸಂಘದ ಅಧ್ಯಕ್ಷರಾದ ಆರ್.ರಂಗಸ್ವಾಮಿ, ನಾಗಪ್ಪ ಟಿ. ಮುದ್ದನಕುಂಟೆ, ಜಿಲ್ಲಾ ಗೊಲ್ಲ ಯಾದವ ಸಂಘದ ನಿರ್ದೆಶಕರಾದ ಪ್ರಕಾಶ್, ಅಲೆಮಾರಿ ಮತ್ತು ಅರೆ ರೆ ಅಲೆಮಾರಿ ಒಕ್ಕೂಟ ಚಿತ್ರದುರ್ಗ ಜಿಲ್ಲಾಧ್ಯಕ್ಷ ಲಕ್ಷ್ಮಿಕಾಂತ. ಎಸ್, ನಗರಸಭೆಯ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ಡಿಸಿಸಿ ಕಾನೂನು ಘಟಕದ ಅಧ್ಯಕ್ಷರಾದ ಡಿ.ಎಸ್.ಸುದರ್ಶನ್ ಮಹಾಲಿಂಗಪ್ಪ ಕಲ್ಲಹಳ್ಳಿ, ಪರಮೇಶ್, ರೇವಣಸಿದ್ದಪ್ಪ, ಆಶ್ವಿನಿ ಕುಮಾರ್, ಮಧುಗೌಢ ಸೇರಿದಂತೆ ಇತರರು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now