ಚಿತ್ರದುರ್ಗ ಜಿಲ್ಲೆಯವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ನೀಡಿ : ಎನ್.ಡಿ.ಕುಮಾರ್

1 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಮೇ.20) : ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಜಿಲ್ಲೆಯ ಯಾರಾದರೂ ಒಬ್ಬ ಶಾಸಕರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ನೀಡಬೇಕೆಂದು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್ ಪಕ್ಷದ ನಾಯಕರುಗಳಲ್ಲಿ ಮನವಿ ಮಾಡಿದ್ದಾರೆ.

ಈ ಬಾರಿಯ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಆರು ಕ್ಷೇತ್ರಗಳ ಪೈಕಿ ಐದರಲ್ಲಿ ಕಾಂಗ್ರೆಸ್ ಜಯಗಳಿಸಿದೆ. ಮೊಳಕಾಲ್ಮುರು ಕ್ಷೇತ್ರದಿಂದ ಎನ್.ವೈ.ಗೋಪಾಲಕೃಷ್ಣ, ಚಳ್ಳಕೆರೆ ಟಿ.ರಘುಮೂರ್ತಿ, ಚಿತ್ರದುರ್ಗ ಕೆ.ಸಿ.ವೀರೇಂದ್ರಪಪ್ಪಿ, ಹೊಸದುರ್ಗ ಬಿ.ಜಿ.ಗೋವಿಂದಪ್ಪ, ಹಿರಿಯೂರು ಡಿ.ಸುಧಾಕರ್ ಇವರುಗಳು ಜಯಶಾಲಿಯಾಗಿದ್ದು, ಇಲ್ಲಿಯವರೆಗೂ ಹೊರಗಿನವರೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಮಂತ್ರಿಗಳಾಗಿದ್ದಾರೆ. ಅವರಿಗೆ ನಮ್ಮ ಜಿಲ್ಲೆಯ ಪರಿಚಯವಿರುವುದಿಲ್ಲ.

ಹಾಗಾಗಿ ಈ ಬಾರಿ ನಮ್ಮ ಜಿಲ್ಲೆಯ ಐವರು ಶಾಸಕರುಗಳ ಪೈಕಿ ಯಾರನ್ನಾದರೂ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲೇಬೇಕು. ಆಗ ಮಾತ್ರ ಐತಿಹಾಸಿಕ ಚಿತ್ರದುರ್ಗ ಸಮಗ್ರ ಅಭಿವೃದ್ದಿಯಾಗಲು ಸಾಧ್ಯ. ಕೆ.ಹೆಚ್.ರಂಗನಾಥ್, ಹೆಚ್.ಆಂಜನೇಯ ಇವರುಗಳನ್ನು ಬಿಟ್ಟರೆ ಉಳಿದ ಎಲ್ಲರೂ ಹೊರಗಿನವರೆ ಇದುವರೆವಿಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳಾಗಿದ್ದಾರೆ. ಅವರಿಗೆ ನಮ್ಮ ಜಿಲ್ಲೆಯನ್ನು ಅಭಿವೃದ್ದಿಪಡಿಸುವ ಇಚ್ಚಾಶಕ್ತಿಯಿರುವುದಿಲ್ಲ. ಹಾಗಾಗಿ ಈ ಬಾರಿಯಾದರೂ ನಮ್ಮ ಜಿಲ್ಲೆಯವರಿಗೆ ಜಿಲ್ಲಾ ಉಸ್ತುವಾರಿ ಪಟ್ಟ ನೀಡಬೇಕು.

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ್ದನ್ನು ನೋಡಿದರೆ ಬಹುತೇಕ ಬೆಂಗಳೂರಿನವರಿಗೆ ಸಿಂಹಪಾಲಾಗುವ ಲಕ್ಷಣಗಳು ಕಂಡು ಬರುತ್ತಿವೆ. ಒಂದು ವೇಳೆ ಹೊರಗಿನವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿದ್ದೇ ಆದಲ್ಲಿ ಉಗ್ರ ಹೋರಾಟ ಮಾಡಲಾಗುವುದೆಂದು
ಎನ್.ಡಿ.ಕುಮಾರ್ ಎಚ್ಚರಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *