Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಡಿಯುವ ನೀರು, ರಸ್ತೆ, ಸೇರಿದಂತೆ ಮೂಲ ಸೌಲಭ್ಯಕ್ಕೆ ಮೊದಲ ಆದ್ಯತೆ ನೀಡಿ : ಜಿಪಂ ಸಿಇಒ ಎಂ.ಎಸ್.ದಿವಾಕರ್

Facebook
Twitter
Telegram
WhatsApp

ಮಾಹಿತಿ ಮತ್ತು ಫೋಟೋ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ.ಡಿ.13 : ಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು, ರಸ್ತೆ, ಆಸ್ಪತ್ರೆಯ ಸೌಲಭ್ಯ ಸೇರಿದಂತೆ ಇನ್ನಿತರೆ ಅಗತ್ಯ ಮೂಲ ಸೌಲಭ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ್ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮುಂದಿನ ಕೆಲವು ದಿನಗಳಲ್ಲಿ ಚುನಾವಣೆ  ಸಮೀಪಿಸುತ್ತಿದ್ದು, ಕುಡಿಯುವ ನೀರು, ರಸ್ತೆ, ಆಸ್ಪತ್ರೆ ಸೌಲಭ್ಯ ಸೇರಿದಂತೆ ಮೂಲ ಸೌಲಭ್ಯಗಳ ಕೊರತೆಯ ಕಾರಣದಿಂದ ಜಿಲ್ಲೆಯ ಜನರಿಂದ ಮತದಾನ ಬಹಿಷ್ಕಾರ ಮುಂತಾದ ಅಹಿಕತರ ಘಟನೆಗಳಿಗೆ ಅವಕಾಶ ನೀಡದಂತೆ ಜನರಿಗೆ ಮೂಲಭೂತ ಸೌಲಭ್ಯಗಳ ಕೊರತೆ ಉಂಟಾಗದಂತೆ ಅಗತ್ಯ ಕ್ರಮವಹಿಸಬೇಕು ಎಂದು ತಾಕೀತು ಮಾಡಿದರು.

ಆರ್.ಓ ಘಟಕಗಳ ನಿರ್ವಹಣೆ ಸಮರ್ಪಕವಾಗಿರಲಿ: ಜಿಲ್ಲೆಯಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಯಾವುದೇ ಕಾರಣಕ್ಕೂ ಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರಿನ ತೊಂದರೆಯಾಗದಂತೆ ಅಗತ್ಯ ಕ್ರಮವಹಿಸಬೇಕು. ಆರ್.ಓ ಘಟಕಗಳಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡದ ಗುತ್ತಿಗೆದಾರರು, ಏಜೆನ್ಸಿಗಳ ವಿರುದ್ಧ ಸೂಕ್ತ ಕ್ರಮವಹಿಸಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಲಜೀವನ್ ಮಿಷನ್ ಗುಣಮಟ್ಟ ಪರಿಶೀಲಿಸಿ: ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಮನೆ ಮನೆಗೆ ನೀರು ಪೂರೈಸುವಂತಹ ಜಲಜೀವನ್ ಮಿಷನ್ ಕಾಮಗಾರಿಯ ಗುಣಮಟ್ಟವನ್ನು ಆಯಾ ತಾಲ್ಲೂಕಿನ ಇಒಗಳು ಹಾಗೂ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಖುದ್ದು ಪರಿಶೀಲನೆ ನಡೆಸಬೇಕು. ಜಲಜೀವನ್ ಮಿಷನ್ ಕಾಮಗಾರಿಯಲ್ಲಿ ಯಾವುದೇ ಲೋಪವಾಗದಂತೆ ಸೂಕ್ತ ಕ್ರಮವಹಿಸಬೇಕು ಎಂದು ಹೇಳಿದರು.
ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿ ತಿಂಗಳು “ಸ್ವಚ್ಛ ಶನಿವಾರ” ಕಾರ್ಯಕ್ರಮ ಹಮ್ಮಿಕೊಳ್ಳುವುದರ ಮೂಲಕ  ಹಳ್ಳಿಗಳ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.

ಆಯುಷ್ ಆಸ್ಪತ್ರೆ ಸ್ಥಳಾಂತರಕ್ಕೆ ಸೂಚನೆ: ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಆಯುಷ್ ಆಸ್ಪತ್ರೆ ಶಿಥಿಲಗೊಂಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಕೂಡಲೇ ಆಯುಷ್ ಆಸ್ಪತ್ರೆಯನ್ನು ಸೂಕ್ತ ಜಾಗಕ್ಕೆ ಸ್ಥಳಾಂತರಿಸಲು ಕ್ರಮವಹಿಸಬೇಕು ಎಂದು ಜಿ.ಪಂ ಸಿಇಒ ಜಿಲ್ಲಾ ಆಯುಷ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕರೊಂದಿಗೆ ಈ ಕುರಿತು ಚರ್ಚಿಸಿ, ಆಸ್ಪತ್ರೆಯ ಆವರಣದಲ್ಲಿರುವ ಎಂ.ಸಿ.ಹೆಚ್ ಹಳೇ ಕಟ್ಟಡಕ್ಕೆ ಸ್ಥಳಾಂತರಿಸಲು ಕ್ರಮವಹಿಸಲಾಗುವುದು ಎಂದು ಡಿಹೆಚ್‍ಓ ಡಾ.ರಂಗನಾಥ್ ಸಭೆಗೆ ಮಾಹಿತಿ ನೀಡಿದರು.

ತಿಂಗಳಿಗೆ ಮೂರು ಹಾಸ್ಟೆಲ್ ಭೇಟಿ ಕಡ್ಡಾಯ: ಜಿಲ್ಲೆಯ ಹಾಸ್ಟೆಲ್‍ಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಪರಿಶೀಲನೆಗಾಗಿ ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಮೀನುಗಾರಿಕೆ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಸೇರಿದಂತೆ ವಿವಿಧ ಅಭಿವೃದ್ಧಿ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳ ತಂಡ ತಿಂಗಳಿಗೆ ಕನಿಷ್ಟ ಮೂರು ಹಾಸ್ಟೆಲ್‍ಗಳಿಗೆ ಕಡ್ಡಾಯವಾಗಿ ಭೇಟಿ ನೀಡಬೇಕು, ಈ ಸಂದರ್ಭದಲ್ಲಿ ಹಾಸ್ಟೆಲ್‍ಗಳಲ್ಲಿನ ನಿರ್ವಹಣೆ, ಸ್ವಚ್ಛತೆ, ಊಟೋಪಹಾರದ ಗುಣಮಟ್ಟದ ಕುರಿತು ಪರಿಶೀಲನೆ ನಡೆಸಿ, ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.
ಆಹಾರ ಪದಾರ್ಥಗಳ ಡೆಲಿವರಿ ಸಪ್ಲೆ ಚಲನ್ ಆಧಾರದ ಮೇಲೆ ಬಿಲ್ ಮಾಡಬೇಕು. ಯಾವುದೇ ಕಾರಣಕ್ಕೂ ಕ್ರೆಡಿಟ್ ಬಿಲ್ ಮೇಲೆ ಮೇಜು ರುಜು ಮಾಡಬಾರದು. ಈ ಕುರಿತು ಎಚ್ಚರವಹಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.

ಜಿಲ್ಲೆಯ ಕೆಲವು ಅನುದಾನಿತ ವಸತಿಯುತ ಪ್ರೌಢಶಾಲೆಗಳಿದ್ದು, ಈ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಇದ್ದಾರೆಯೇ? ಎಂಬುವುದರ ಕುರಿತು ವರದಿ ನೀಡಬೇಕು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯಿತ್ರಿ, ಮುಖ್ಯ ಲೆಕ್ಕಾಧಿಕಾರಿ ಡಿ.ಆರ್.ಮಧು ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

error: Content is protected !!