ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಚಿತ್ರದುರ್ಗ ಮೇ. 30 : ವಿಧಾನಸಭಾ ಕ್ಷೇತ್ರವನ್ನು ಅದ್ವಿತೀಯವಾಗಿ ಅಭಿವೃದ್ಧಿ ಪಡಿಸಿದ ಶಾಸಕ ಟಿ.ರಘುಮೂರ್ತಿ ಅವರಿಗೆ ಸಚಿವ ಸಂಪುಟದಲ್ಲಿ ಸಚಿವ ಸ್ಥಾನವನ್ನು ನೀಡಬೇಕೆಂದು ಚಳ್ಳಕೆರೆ ಮಕ್ಕಳ ಆಸ್ಪತ್ರೆಯ ಮಾಲೀಕರು ಹಾಗೂ ಮಕ್ಕಳ ತಜ್ಞ ಡಾ. ಬಿ.ಚಂದ್ರನಾಯ್ಕ್ ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿ, ಬಯಲುಸೀಮೆಯ ಬಂಗಾಡಿನಲ್ಲಿ ಶೈಕ್ಷಣಿಕ, ಸಾಮಾಜಿಕ, ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸಿದಂತಹ ನಾಯಕ. ಪಕ್ಷಾತೀತ, ಜಾತ್ಯತೀತವಾಗಿ ಸಮಾಜ ಸೇವೆ ಮಾಡುವಂತಹ ಗುಣವನ್ನು ಹೊಂದಿರುವ ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ನೀಡುವುದರಿಂದ ಕ್ಷೇತ್ರ ಮಾತ್ರವಲ್ಲದೆ, ರಾಜ್ಯದ ಅಭಿವೃದ್ಧಿಯು ಕೂಡ ಆಗಲಿದೆ. ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಐದು ದಶಕದಿಂದ ನಿರಂತರವಾಗಿ ಗೆಲುವು ಸಾಧಿಸಿದವರೇ ಇಲ್ಲ, ಆದರೆ, ಶಾಸಕ ಟಿ.ರಘುಮೂರ್ತಿ ಕಾಂಗ್ರೆಸ್ ಪಕ್ಣದಿಂದ ಮೂರು ಬಾರಿ ಸ್ಪರ್ಧಿಸಿ ಮೂರುಭಾರಿಯೂ ಗೆಲುವು ಸಾಧಿಸಿ ಹ್ಯಾಟ್ರಿಕ್ ಗೆಲುವು ಕಂಡವರು. ಕಾಂಗ್ರೆಸ್ ಪಕ್ಷದಿಂದ 2013ರಲ್ಲಿ ಕಣಕ್ಕಿಳಿಯುವ ಮೂಲಕ ಮೂರು ಬಾರಿ ಜಯಶೀಲರಾಗಿ ಕ್ಷೇತ್ರದ ಅಭಿವೃದ್ಧಿಗೆ ಪಣತೊಟ್ಟು ನಿಂತವರಾಗಿದ್ದಾರೆ. ಎಲ್ಲಾ ಸಮುದಾಯಗಳಿಗೆ ಸಮುದಾಯ ಭವನ ಕಟ್ಟಿ ಹಾಗೂ ಸಣ್ಣಪುಟ್ಟ ಸಮುದಾಯಗಳನ್ನು ಗುರುತಿಸಿ ಅವರನ್ನು ಸಮಾಜಮುಖಿಯಾಗಿ ಬೆಳಕಿಗೆ ತರುವಂತಹ ಕೆಲಸ ಅವರು ಪ್ರಾಮಾಣಿಕವಾಗಿ ಮಾಡಿದ್ದಾರೆ. ಕ್ಷೇತ್ರ ಮಾತ್ರವಲ್ಲದೆ ಜಿಲ್ಲೆಯ ಹಲವಾರು ಸಮಸ್ಯೆಗಳ ಕುರಿತು ರಾಜ್ಯದ ಗಮನ ಸೆಳೆಯುವಂತಹ ಕೆಲಸವನ್ನು ಮಾಡಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಮತ್ತಷ್ಟು ಕೆಲಸ ಕಾರ್ಯಗಳನ್ನು ಮಾಡಲು ಪ್ರೋತ್ಸಾಹ ನೀಡಬೇಕೆಂದು ಈ ಮೂಲಕ ಕಾಂಗ್ರೆಸ್ ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.
ಶಾಸಕ ಟಿ.ರಘುಮೂರ್ತಿಯವರು ಸಣ್ಣ,ಸಣ್ಣ ಸಮುದಾಯಗಳನ್ನು ಗುರುತಿಸಿ ಅವರಿಗೆ ಮೂಲ ಸೌಲಭ್ಯಗಳನ್ನು ಒದಗಿಸಿರುವಂತಹ ಮಹತ್ವದ ಕಾರ್ಯವನ್ನು ಮಾಡಿರುವುದು ಒಂದು ಕಡೆಯಾದರೆ ಮತ್ತೊಂದು ಕಡೆಯಲ್ಲಿ ಅವರ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವಂತಹ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಿದ್ದಾರೆ. ಇದರ ಜೊತೆ ಜೊತೆಯಲಿ ಕ್ಷೇತ್ರದ ಜನಸಾಮಾನ್ಯ ಸಮಸ್ಯೆಗಳನ್ನು ಆಲಿಸುವಂತಹ ಮನಸ್ಸುಳ್ಳವರಾಗಿದ್ದು, ಇವರ ಸೇವಾ ಕಾರ್ಯಗಳನ್ನು ಕ್ಷೇತ್ರದ ಎಲ್ಲಾ ಜನರು ಮೆಚ್ಚಿರುವುದು ಮತ್ತೊಂದು ವಿಶೇಷವಾಗಿದೆ. ಇವರಿಗೆ ಪಕ್ಷದ ಸಚಿವ ಸ್ಥಾನ ನೀಡಲಿ ಎಂದು ಡಾ. ಬಿ.ಚಂದ್ರನಾಯ್ಕ್ ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















