ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 05 : ಅಭಿವೃದ್ದಿಯ ಹರಿಕಾರ ಹ್ಯಾಟ್ರಿಕ್ ಹೀರೋ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿರವರಿಗೆ ಸಚಿವ ಸ್ಥಾನ ನೀಡುವಂತೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
ಅವರಿಗೆ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಶನಿವಾರ ಮನವಿ ಸಲ್ಲಿಸಿದರು.
ಉಪ ಮುಖ್ಯಮಂತ್ರಿಯಾದ ಮೇಲೆ ಪ್ರಥಮ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸಿದ್ದ ಡಾ.ಜಿ.ಪರಮೇಶ್ವರ್‍ರವರಿಗೆ ಮನವಿ ಸಲ್ಲಿಸಿದ ಕೆ.ಟಿ.ಶಿವಕುಮಾರ್ ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಜಿಲ್ಲೆಗೆ ಮೆಡಿಕಲ್ ಕಾಲೇಜು ಹೋರಾಟಕ್ಕಾಗಿ ಶಾಸಕ ಟಿ.ರಘುಮೂರ್ತಿರವರ ಕೊಡುಗೆ ಅಪಾರವಾಗಿದೆ. ಅಭಿವೃದ್ದಿ ಬಗ್ಗೆ ಕಾಳಜಿ ಹೊಂದಿರುವ ಇವರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆ ಶರ ವೇಗದಲ್ಲಿ ಅಭಿವೃದ್ದಿ ಕಾಣುವುದರಲ್ಲಿ ಸಂದೇಹವಿಲ್ಲ ಎಂದು ಉಪ ಮುಖ್ಯಮಂತ್ರಿಯವರಲ್ಲಿ ಕೋರಿದರು.
ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಅವಿನಾಶ್, ಪಾಂಡು ಈ ಸಂದರ್ಭದಲ್ಲಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








