in ,

ಮಾದಿಗ ಜನಾಂಗದ ಇಬ್ಬರಿಗೆ ಸಚಿವ ಸ್ಥಾನ ನೀಡಿ : ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ

suddione whatsapp group join

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 87220 22817

ಚಿತ್ರದುರ್ಗ, (ಮೇ.16) :  ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದಲ್ಲಿ ಮಾದಿಗ ಜನಾಂಗದ ಇಬ್ಬರನ್ನು ಮಂತ್ರಿಗಳನ್ನಾಗಿ ಮಾಡುವಂತೆ ಕೆಪಿಸಿಸಿ ಮತ್ತು ಎಐಸಿಸಿ ಅಧ್ಯಕ್ಷರನ್ನು ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು ಒತ್ತಾಯಿಸಿದ್ದಾರೆ.

ನಗರದ ಹೊರವಲಯದ ಮಾದಾರ ಗುರುಪೀಠದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಇಷ್ಟೂಂದು ಸ್ಥಾನಗಳನ್ನು ಪಡೆಯುವಲ್ಲಿ ಮಾದಿಗ ಜನಾಂಗದ ಬೆಂಬಲವೂ ಕಾರಣವಾಗಿದೆ. ನಮ್ಮ ಜನಾಂಗದಲ್ಲಿ ಹಿರಿಯ ನಾಯಕರಾದ ಮುನಿಯಪ್ಪರವರು ಉಪ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಅದೇ ರೀತಿ ಮತ್ತೋರ್ವ ಶಾಸಕರಾದ ತಿಮ್ಮಾಪುರರವರನ್ನು ಸಚಿವರನ್ನಾಗಿ ಮಾಡುವಂತೆ ಒತ್ತಾಯಿಸಿದ್ದು, ಸಾಮಾಜಿಕ ನ್ಯಾಯದ ಅನುಗುಣವಾಗಿ ಈ ಇಬ್ಬರಿಗೂ ಸಚಿವ ಸ್ಥಾನವನ್ನು ನೀಡಿದರೆ ದಕ್ಷಿಣ ಮತ್ತು ಉತ್ತರಕ್ಕೆ ನ್ಯಾಯ ಸಿಕ್ಕಂತೆ ಆಗುತ್ತದೆ ಎಂದರು.

ಈ ಇಬ್ಬರಿಗೂ ಸಚಿವ ಸ್ಥಾನವನ್ನು ನೀಡುವುದರ ಜೊತೆಗೆ ಪ್ರಮುಖವಾದ ಖಾತೆಗಳನ್ನು ನೀಡಬೇಕಿದೆ. ಈ ಇಬ್ಬರಿಗೆ ಸಚಿವ ಸ್ಥಾನ ನೀಡಿದರೆ ಮಾದಿಗ ಜನಾಂಗಕ್ಕೆ ನ್ಯಾಯ ಸಿಕ್ಕಂತೆ ಆಗುತ್ತದೆ. ಇದರ ಬಗ್ಗೆ ಎಐಸಿಸಿ ಮತ್ತು ಕೆಪಿಸಿಸಿ ಅಲೋಚನೆಯನ್ನು ಮಾಡಬೇಕಿದೆ ಇದರ ಬಗ್ಗೆ ಜನಾಂಗದವತಿಯಿಂದ ಮನವಿಯನ್ನು ಸಲ್ಲಿಸಲಾಗುವುದು ಎಂದು ಶ್ರೀಗಳು ತಿಳಿಸಿದರು.

ಗೋಷ್ಟಿಯಲ್ಲಿ ಉಪಸ್ಥಿತರಿದ್ದ ಆದಿಜಾಂಬವ ಮಠದ ಶ್ರೀ ಷಡಾಕ್ಷರಮುನಿ ಶ್ರೀಗಳು ಮಾತನಾಡಿ, ಈ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಯಾದಲ್ಲಿ ಅದನ್ನು ಮಾದಿಗ ಜನಾಂಗದ ಹಿರಿಯವರಾದ ಮುನಿಯಪ್ಪರವರಿಗೆ ನೀಡಬೇಕು, ಇತರೆ ಶಾಸಕರಿಗೆ ಜವಾಬ್ದಾರಿಯುತ ಹುದ್ದೆಯನ್ನು ನೀಡುವುದರ ಮೂಲಕ ಅವರನ್ನು ಗೌರಯುತವಾಗಿ ಕಾಣಬೇಕಿದೆ. ಪಕ್ಷ ಅಧಿಕಾರಕ್ಕೆ ಮಾದಿಗ ಸಮುದಾಯ ಬೆಂಬಲವನ್ನು ನೀಡಿದೆ. ಇದನ್ನು ಪಕ್ಷದವರು ಮರೆಯಬಾರದು ಎಂದರು.

ಕರ್ನಾಟಕ ರಾಜ್ಯ ಮಾತಂಗ ಪೌಡೇಷನ್ ಅಧ್ಯಕ್ಷ ಲೋಕೇಶ್ ಮಾತನಾಡಿ, 2018ರ ಚುನಾವಣೆಯಲ್ಲಿ ಮಾದಿಗ ಜನಾಂಗ ಕಾಂಗ್ರೆಸ್ ಪಕ್ಷವನ್ನು ಕೈಹಿಡಿಯದಿದ್ದರಿಂದ ಅಧಿಕಾರಕ್ಕೆ ಬರಲಿಲ್ಲ ಆದರೆ ಈಗ ನಮ್ಮ ಜನಾಂಗ ಪೂರ್ಣ ಪ್ರಮಾಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಪಕ್ಷ ನಮ್ಮ ಇಬ್ಬರು ನಾಯಕರನ್ನು ಸಚಿವರನ್ನಾಗಿ ಮಾಡಬೇಕಿದೆ ಎಂದು ತಿಳಿಸಿದರು.

ನಮ್ಮ ಸಮಾಜ ಹಿಂದುಳಿದ ಸಮಾಜವಾಗಿದೆ. ಚುನಾಯಿತರಿಗೆ ಗೌರಯುತವಾದ ಸ್ಥಾನ ಮತ್ತು ಗೌರವನ್ನು ನೀಡಬೇಕಿದೆ. ರಾಷ್ಟ್ರ ರಾಜಕಾರಣದಲ್ಲಿಂದ ಮುನಿಯಪ್ಪರವರು ರಾಜ್ಯ ರಾಜಕಾರಣಕ್ಕೆ ಬಂದಿದ್ದರಿಂದ ಕಾಂಗ್ರೆಸ್ ಪಕ್ಷಕ್ಕೆ ಇಷ್ಟೊಂದು ಸ್ಥಾನಗಳು ಬರಲು ಸಾದ್ಯವಾಯಿತು ಎಂಧರು.
ಗೋಷ್ಟಿಯಲ್ಲಿ ಪ್ರಸನ್ನ, ರವಿ, ಕುಮಾರ, ಮಂಜುನಾಥ್, ಲಕ್ಷ್ಮೀರಂಗಯ್ಯ, ವೆಂಕಟೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಸಿಎಂ ಸ್ಥಾನ ಬಿಟ್ಟು ಕೊಡಲು ಹೈಕಮಾಂಡ್ ನೀಡುವ 6 ಆಫರ್ ಗಳಿಗೆ ಒಪ್ಪುತ್ತಾರಾ ಡಿಕೆಶಿ..?

ಗುರುವಿಗಿಂತ ದೊಡ್ಡವರು ಯಾರೂ ಇಲ್ಲ : ಶ್ರೀ ಶಿವಲಿಂಗಾನಂದ ಸ್ವಾಮೀಜಿ