ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜೂನ್. 01 : ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಶಾಸಕ ಕೊಳಗೇರಿ ಅಭಿವೃದ್ದಿ ಮಂಡಳಿ ಅಧ್ಯಕ್ಷರಾಗಿರುವ ಪ್ರಸಾದ್ ಅಬ್ಬಯ್ಯ ಇವರಿಗೆ ಕ್ಯಾಬಿನೆಟ್ ದರ್ಜೆಯ ಸಚಿಸ ಸ್ಥಾನ ನೀಡುವಂತೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್‍ರವರಲ್ಲಿ ಜಿಲ್ಲಾ ಛಲವಾದಿ ಜನಾಂಗದ ಯುವ ಮುಖಂಡ ಶಿವಪ್ರಸಾದ್ ಎಸ್. ಆಗ್ರಹಿಸಿದ್ದಾರೆ.
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ಪರಿಶಿಷ್ಟ ಜಾತಿಯ 36 ಹಾಗೂ ಪರಿಶಿಷ್ಟ ಪಂಗಡದ ಹದಿನೈದು ಮೀಸಲು ಕ್ಷೇತ್ರಗಳಲ್ಲಿ ಛಲವಾದಿ ಸಮುದಾಯದ ಮತಗಳು ನಿರ್ಣಾಯಕ ಪಾತ್ರ ವಹಿಸುತ್ತಿರುವುದರಿಂದ ಪ್ರಸಾದ್ ಅಬ್ಬಯ್ಯನವರಿಗೆ ಕ್ಯಾಬಿನೆಟ್ ದರ್ಜೆಯ ಮಂತ್ರಿ ಸ್ಥಾನ ನೀಡುವ ಮೂಲಕ ಛಲವಾದಿ ಜನಾಂಗಕ್ಕೆ ಸಾಮಾಜಿಕ ಮನ್ನಣೆ ನೀಡಬೇಕೆಂದು ಶಿವಪ್ರಸಾದ್ ಎಸ್. ಕಾಂಗ್ರೆಸ್ ವರಿಷ್ಟರಲ್ಲಿ ಮನವಿ ಮಾಡಿದ್ದಾರೆ.










