Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆರ್.ಧರ್ಮಸೇನ ಅವರಿಗೆ ಸಚಿವ ಸ್ಥಾನ ನೀಡಿ : ಜಯಣ್ಣ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಮೇ. 29 :
ಕರ್ನಾಟಕ ರಾಜ್ಯ ಕಾಂಗ್ರೆಸ್‍ನ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಅಧ್ಯಕ್ಷರಾದ ಆರ್.ಧರ್ಮಸೇನರವರನ್ನು ಎಂಎಲ್.ಸಿ. ಮಾಡಿ ಸಚಿವರನ್ನಾಗಿ ಮಾಡುವಂತೆ ಪಕ್ಷದ ವರಿಷ್ಠರನ್ನು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷರಾದ ಎಸ್.ಜಯ್ಯಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ದುರುಗೇಶ್, ಎಂ ವೆಂಕಟೇಶ್ ರಾಜ್ಯ ಸಂಚಾಲಕರಾದ ಸಣ್ಣ ಕುಮಾರ್ ಒತ್ತಾಯಿಸಿದ್ದಾರೆ.

ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ಆರ್.ಧರ್ಮಸೇನರವರು ಎರಡು ಬಾರಿ ಎಂ.ಎಲ್.ಸಿ. ಯಾಗಿದ್ದು, ರಾಜ್ಯದಲ್ಲಿ ಎಸ್.ಸಿ.ಘಟಕದ ಮುಂಚೂಣಿಯಲ್ಲಿ ಪಕ್ಷವನ್ನು ಸಂಘಟಿಸಿದ್ದಾರೆ. ಈ ಹಿನ್ನಲೆಯಲ್ಲಿ ಇವರನ್ನು ಎಂ.ಎಲ್.ಸಿ. ಮಾಡುವುದರ ಮೂಲಕ ಸಚಿವರನ್ನಾಗಿ ಮಾಡಬೇಕೆಂದು ಜಿಲ್ಲೆಯ ಪರಿಶಿಷ್ಟ ಜಾತಿಯ ರಾಜ್ಯ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು ಪಕ್ಷದ ವರಿಷ್ಟರಲ್ಲಿ ಒತ್ತಾಯಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now