ಸುದ್ದಿಒನ್, ಚಿತ್ರದುರ್ಗ, ಜೂನ್. 30 : ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಹಾಗೂ ದೈಹಿಕ ಸದೃಢತೆ ಹೆಚ್ಚಿಸುತ್ತದೆ ಎಂದು ಬಾಪೂಜಿ ಸಮೂಹ ಶಿಕ್ಷಣದ ಕಾರ್ಯದರ್ಶಿ ಡಾ.ಕೆ.ಎಂ.ವೀರೇಶ್ ತಿಳಿಸಿದರು.
ನಗರದ ಪಿಳ್ಳೇಕೆರನಹಳ್ಳಿಯಲ್ಲಿರುವ ಕೆ.ಎಂ.ಎಸ್.ಪಿಯು ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ ಕ್ರೀಡಾ ಕೂಟದಲ್ಲಿ ಕ್ರೀಡಾ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಕ್ರೀಡೆ ಮಾನವನಲ್ಲಿ ನಿರತಂತರ ಕ್ರಿಯಾಶೀಲತೆಯಾ ಜೊತೆಗೆ ನವಚೈತನ್ಯವನ್ನು ಉಂಟು ಮಾಡುತ್ತದೆ. ಸತತವಾಗಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಮುಪ್ಪಿನ ಸಮಯದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳು ಪಠ್ಯಕ್ಕೆ ನೀಡುವ ಮಹತ್ವವನ್ನು ಕ್ರೀಡೆಗೂ ನೀಡಿ ಸದೃಢ ಪ್ರಜೆಗಳಾಗಬೇಕೆಂದು ತಿಳಿಸಿದರು.
ವಿಷನ್ ಅಕಾಡೆಮಿಯ ಮುಖ್ಯೆಸ್ಥರಾದ ಲೋಕೆಶ್ ಅವರು ಮಾತನಾಡಿ, ವ್ಯಕ್ತಿಯ ವ್ಯಕ್ತಿವ ಹಾಗೂ ಫೀಟ್ನಸ್ ರೂಪಿಸುವಲ್ಲಿ ಕ್ರೀಡೆಗಳು ಪ್ರಮುಖ ಪಾತ್ರ ವಹಿಸುತ್ತವೇ. ವಿದ್ಯಾರ್ಥಿಗಳು ಈ ಮೂಲಕ ನಿಜವಾದ ಜಾಗತಿಕ ಅನುಭವವನ್ನು ಪಡೆಯಲು ಸಹಕಾರಿಯಾಗುತ್ತದೆ ಎಂದರು.
ಕೆ.ಎಂ.ಎಸ್.ಪಿಯು ಕಾಲೇಜಿನ ಪ್ರಾಚಾರ್ಯರಾದ ವೀರೇಶ್, ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಜಯಲಕ್ಷ್ಮೀ, ವಿಷನ್ ಅಕಾಡೆಮಿಯ ಆಡಳಿತಾಧಿಕಾರಿಗಳಾದ ಜ್ಞಾನದೇವ.ಸಿ.ಪಿ, ಬಾಪೂಜಿ ಪದವಿ ಕಾಲೇಜಿನ ಪ್ರಾಚಾರ್ಯೆ ಡಾ.ಮಂಜುಳ ಹಾಗೂ ಉಪನ್ಯಾಸಕ ವರ್ಗ ಮತ್ತಿತರರು ಇದ್ದರು.











