Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ದರಾಮಯ್ಯ ಬದಲಾದರೆ ಡಾ.ಜಿ.ಪರಮೇಶ್ವರವರಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡಿ : ಛಲವಾದಿ ಸಮುದಾಯದ ಮುಖಂಡರ ಆಗ್ರಹ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಡಿ. 03 : ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯ ಮಾತು ಚರ್ಚೆಯಲ್ಲಿದೆ. ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ರವರನ್ನು ಬದಲಾವಣೆ ಮಾಡುವುದಾದರೆ ನಮ್ಮ ಛಲವಾದಿ ಸಮುದಾಯದ ಮುಖಂಡರಾದ ಡಾ.ಜಿ.ಪರಮೇಶ್ವರವರಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡುವಂತೆ ಕಾಂಗ್ರೆಸ್ ಪಕ್ಷದ ಹೈಕಮಾಂಡಿಗೆ ಚಿತ್ರದುರ್ಗದ ಛಲವಾದಿ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಛಲವಾದಿ ಸಮುದಾಯದ ಮುಖಂಡರು ನಗರಸಭೆಯ ಮಾಜಿ ಅಧ್ಯಕ್ಷರಾದ ಹೆಚ್.ಸಿ.ನಿರಂಜನಮೂರ್ತಿ ಮಾತನಾಡಿ, ಪರಮೇಶ್ವರ ರವರು ಕಾಂಗ್ರೆಸ್ ಪಕ್ಷಕ್ಕಾಗಿ ಪರಿಶ್ರಮವನ್ನು ಹಾಕಿದ್ದಾರೆ, ಕಳೆದ ಸಾರಿ ರಾಜ್ಯದಲ್ಲಿ ಪಕ್ಷ ಆಧಿಕಾರಕ್ಕೆ ಬರಲು ಅವರ ಶ್ರಮವೂ ಸಹಾ ಇದೆ. ಕಾಂಗ್ರೆಸ್ ಪಕ್ಷದ ಸರ್ಕಾರದಲ್ಲಿ ವಿವಿಧ ರೀತಿಯ ಸಚಿವ ಸ್ಥಾನಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಅನುಭವ ಅವರಿಗೆ ಇದೆ, ಅಲ್ಲದೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗೆಲ್ಲಾ ಬೇರೆ ಸಮುದಾಯದವರು ಮುಖ್ಯಮಂತ್ರಿಯಾಗಿದ್ದಾರೆ ಇದುವರೆವಿಗೂ ದಲಿತ ಸಿಎಂ ಆಗಿಲ್ಲ ದಲಿತ ಸಿಎಂ ಅಗಬೇಕೆಂದು ಕೂಗು ಮಾತ್ರ ಇದೆ ಆದರೆ ಇದುವರೆವಿಗೂ ಆಗಿಲ್ಲ ಎಂದರು.

ನಮ್ಮ ಛಲವಾದಿ ಸಮುದಾಯ ಎಂದಿದ್ದರೂ ಸಹಾ ಕಾಂಗ್ರೆಸ್ ಪರವಾಗಿ ಇದೆ ನಮ್ಮ ಮತಗಳು ಯಾವೋತ್ತು ಸಹಾ ಕಾಂಗ್ರೆಸ್‍ಗೆ ಕಳೆದ ಬಾರಿ ನಮ್ಮ ಸಮುದಾಯ ಕಾಂಗ್ರೆಸ್ ಪರವಾಗಿ ಮತವನ್ನು ಚಲಾವಣೆ ಮಾಡಿದೆ ಇದರಿಂದ ಕಾಂಗ್ರೆಸ್ ಪಕ್ಷದ ಮೇಲೆ ನಮ್ಮ ಸಮುದಾಯದ ಋಣ ಇದೆ ಇದನ್ನು ತೀರಿಸಬೇಕಾದರೆ ಸಿದ್ದರಾಮಯ್ಯರವರ ಬದಲಾವಣೆಯಾಗುವುದಾದರೆ ನಮ್ಮ ಸಮುದಾಯದ ಮುಖಂಡರಾದ ಡಾ.ಜಿ.ಪರಮೇಶ್ವರರವರಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕು ಎಂದು ಪಕ್ಷದ ಹೈಕಮಾಂಡನ್ನು ಒತ್ತಾಯಿಸಿದ್ದು ಇದರ ಬಗ್ಗೆ ರಾಜ್ಯದ ಛಲವಾದಿ ಮುಖಂಡರು ಸೇರಿ ಪಕ್ಷದ ಹೈಕಮಾಂಡನ್ನು ಬೇಟಿ ಮಾಡಿ ಮನವಿ ಮಾಡಲಾಗುವುದೆಂದು ನಿರಂಜನ ಮೂರ್ತಿ ತಿಳಿಸಿದರು.
ಮುಖಂಡರಾದ ರವಿಕುಮಾರ್ ಮಾತನಾಡಿ ಕಳೆದ ಕೆಲವು ವರ್ಷಗಳ ಹಿಂದೆ ಚಿತ್ರದುರ್ಗದಲ್ಲಿ ನಡೆದ ಎಸ್.ಟಿ.ಎಸ್.ಸಿ. ಸಮಾವೇಶವನ್ನು ಯಶಸ್ವಿ ಮಾಡಿದ ಕೀರ್ತಿ ಪರಮೇಶ್ವರವರಿಗೆ ಸಲ್ಲುತ್ತದೆ. ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯರವರು ಬದಲಾವಣೆಯಾಗುವುದಾದರೆ ಅವರಿಗೆ ಹೈಕಮಾಂಡ್ ಒಂದು ಅವಕಾಶವನ್ನು ನೀಡಬೇಕಿದೆ. ಅವರು ಪಕ್ಷದ ಅಧ್ಯಕ್ಷರಾಗಿ ಪಕ್ಷವನ್ನು ಯಶಸ್ವಿಯಾಗಿ ಮುನ್ನೆಡೆಸಿದ್ದಾರೆ, ಇದನ್ನು ಪರಿಗಣಿಸಿ ಹೈಕಮಾಂಡ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಒತ್ತಾಯಿಸಿದ್ದಾರೆ.
ಗೋಷ್ಟಿಯಲ್ಲಿ ಛಲವಾದಿ ಸಮುದಾಯದ ಮುಖಂಡರಾದ ಗುರುಮೂರ್ತಿ, ರಾಮಲಿಂಗಪ್ಪ, ಶಶಾಂಕ್ ಎನ್, ದಯಾನಂದ ಅಪ್ಪಣ್ಣ ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now