Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಜಿ.ಹೆಚ್.ಮೋಹನ್‍ಗೆ ಟಿಕೆಟ್ ನೀಡಿ :  ಅಖಿಲ ಕರ್ನಾಟಕ ಛಲವಾದಿ ಮಹಾಸಭಾ ಮನವಿ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.16 : ಎಸ್ಸಿ ಮೀಸಲು ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪನವರ ಪುತ್ರ ಜಿ.ಹೆಚ್.ಮೋಹನ್‍ಗೆ ಟಿಕೆಟ್ ನೀಡುವಂತೆ ಅಖಿಲ ಕರ್ನಾಟಕ ಛಲವಾದಿ ಮಹಾಸಭಾದಿಂದ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪನವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿಗಳಿಂದ ಅಹವಾಲು ಸ್ವೀಕರಿಸಲು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸುತ್ತಿದ್ದ ಸಚಿವ ಹೆಚ್.ಸಿ.ಮಹದೇವಪ್ಪನವರಿಗೆ ಐಮಂಗಲ ಸಮೀಪ ಬುದ್ದನ ಪ್ರತಿಮೆ ನೀಡಿದ ಛಲವಾದಿ ಜನಾಂಗದವರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಹಲವಾರು ವರ್ಷಗಳಿಂದಲೂ ಪಕ್ಷದಲ್ಲಿ ನಿಷ್ಟಾವಂತರಾಗಿರುವ ಜಿ.ಹೆಚ್.ಮೋಹನ್ ಯಾವುದೇ ಫಲಾಪೇಕ್ಷೆಯಿಲ್ಲದೆ ಪಕ್ಷಕ್ಕೆ ನಿಷ್ಟರಾಗಿದ್ದಾರೆ.

ಜಿಲ್ಲೆಯಲ್ಲಿ ಛಲವಾದಿ ಜನಾಂಗಕ್ಕೆ ಇದುವರೆವಿಗೂ ಯಾವುದೆ ರಾಜಕೀಯ ಪಕ್ಷಗಳು ಪ್ರಾತಿನಿಧ್ಯ ನೀಡಿಲ್ಲ. ಹಾಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜಿ.ಹೆಚ್.ಮೋಹನ್‍ಗೆ ಕಾಂಗ್ರೆಸ್‍ನಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ವಿನಂತಿಸಿದರು.

ಅಖಿಲ ಕರ್ನಾಟಕ ಛಲವಾದಿ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಹಾಲೇಶಪ್ಪ, ಜಿಲ್ಲಾ ಗೌರವಾಧ್ಯಕ್ಷ ಹೆಚ್.ಅಣ್ಣಪ್ಪಸ್ವಾಮಿ, ಶಿವಪ್ರಸಾದ್, ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ರಾಜಗಿರಿ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಯೋಗೀಶ್ ಸಹ್ಯಾದ್ರಿ ಬಿಜೆಪಿ ಸೇರ್ಪಡೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ನ. 22 : ಉಪನ್ಯಾಸಕರು ಹಾಗೂ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿ, ಅಧ್ಯಕ್ಷರಾದ ಯೋಗೀಶ್ ಸಹ್ಯಾದ್ರಿಯವರು ಬಿಜೆಪಿ

ನವೆಂಬರ್ 26 ರಿಂದ 28 ರವರೆಗೆ ಭ್ರಷ್ಟಾಚಾರ ತಡೆಯಲು ಉಪವಾಸ ಸತ್ಯಾಗ್ರಹ : ಎಎಪಿ ಜಗದೀಶ್

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ನ. 22 : ಇತ್ತೀಚಿನ ದಿನಮಾನದಲ್ಲಿ ಎಲ್ಲಡೆ ಭ್ರಷ್ಠಾಚಾರ ತುಂಬಿ ತುಳುಕಾಡುತ್ತಿದೆ, ಇದನ್ನು ತಡೆಯುವ ಸಲುವಾಗಿ ಭ್ರಷ್ಠಾಚಾರ

ನಿಮ್ಮ ಬಿಪಿಎಲ್ ಕಾರ್ಡ್ ಕೂಡ ರದ್ದಾಗಿದ್ಯಾ..? ಹಾಗಾದ್ರೆ ಸರಿಯಾಗಲು ಹೀಗೆ ಮಾಡಿ

ಬೆಂಗಳೂರು: ನಕಲಿ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡ್ತೀವಿ ಎಂದು ಸರ್ಕಾರ ಹೇಳಿತ್ತು. ಆದ್ರೆ ಅನರ್ಹರ ಜೊತೆಗೆ ಅರ್ಹರ ಬಿಪಿಎಲ್ ಕಾರ್ಡ್ ಕೂಡ ರದ್ದಾಗಿದೆ. ಇದರಿಂದ ಸಾಕಷ್ಟು ಜನ ನಿಂದಿದ್ದಾರೆ. ಅರ್ಹರ ಬಿಪಿಎಲ್ ಕಾರ್ಡ್

error: Content is protected !!