ಕನ್ನಡದ ಎಲ್ಲ ಕಾರ್ಯಗಳಿಗೆ ಅಗತ್ಯವಾದ ಎಲ್ಲ ಸಹಕಾರ ನೀಡುವೆ : ಶಾಸಕ ಕೆ.ಸಿ.ವೀರೇಂದ್ರ

1 Min Read

 

ಸುದ್ದಿಒನ್, ಚಿತ್ರದುರ್ಗ, (ಜೂ.06) : ಸಾಹಿತ್ಯ ಪರಿಷತ್ತಿನ ಎಲ್ಲ ಚಟುವಟಿಕೆಗಳಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಹೇಳಿದ್ದಾರೆ.

ಅವರು ಸೋಮವಾರ ಶಾಸಕರನ್ನು ಭೇಟಿ ನೀಡಿದ ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿಯವರೊಂದಿಗೆ ಮಾತನಾಡಿದರು.

ಕಸಾಪ ಅಧ್ಯಕ್ಷ ಕೆ.ಎಂ. ಶಿವಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಕಸಾಪ ಚುರುಕಿನಿಂದ ಚಟುವಟಿಕೆಗಳನ್ನು ಕೈಗೊಳ್ಳುತ್ತಿದೆ. ಆರು ತಾಲ್ಲೂಕುಗಳಲ್ಲಿರುವ ಘಟಕಗಳು ಸಕ್ರಿಯವಾಗಿವೆ. ಜಿಲ್ಲಾ ಕೇಂದ್ರ ಚಿತ್ರದುರ್ಗದಲ್ಲಿ ಕನ್ನಡ ಭವನದ ಕೊರತೆಯಿದೆ. ಇದು ಜಿಲ್ಲೆಯ ಸಾಹಿತ್ಯಾಸಕ್ತರ ಮತ್ತು ಪರಿಷತ್ತಿನ ಸದಸ್ಯರ ಬಹುದಿನದ ಬೇಡಿಕೆಯಾಗಿದೆ. ಸಣ್ಣ ಮತ್ತು ಮಧ್ಯಮ ಪ್ರಮಾಣದ ಸಾಹಿತ್ಯ,ಸಂಸ್ಕøತಿ ಚಟುವಟಿಕೆಗಳನ್ನು ಕೈಗೊಳ್ಳಲು ಕನ್ನಡ ಭವನದ ಕೊರತೆಯಿದೆ. ಈಗಾಗಲೇ ಜಿಲ್ಲಾ ಕೇಂದ್ರದಲ್ಲಿ ಪರಿಷತ್ತಿನ ವಿಶಾಲ ನಿವೇಶನವಿದೆ. ಕನ್ನಡ ಭವನ ನಿರ್ಮಾಣದ ಜತೆಗೆ ಸಾಹಿತ್ಯ ಚಟುವಟಿಕೆಗಳಿಗೆ ಸಹಕಾರ ನೀಡಬೇಕು ಎಂದು ವಿನಂತಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ ಕೆ.ಸಿ.ವೀರೇಂದ್ರ, ನಾನು ಮೊದಲಿನಿಂದಲೂ ಕನ್ನಡಪರವಾದ ಮನೋಭಾವ ಹೊಂದಿದ್ದೇನೆ. ಹೀಗಾಗಿ ಕನ್ನಡದ ಎಲ್ಲ ಕಾರ್ಯಗಳಿಗೆ ಅಗತ್ಯವಾದ ಎಲ್ಲ ಸಹಕಾರವನ್ನು ನೀಡಲಾಗುವುದು ಎಂದು ಹೇಳಿದರು. ಕನ್ನಡದ ಶಾಲು, ಪೇಟ, ಹಾರ ಹಾಕಿ ಶಾಸಕರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕಸಾಪ ಸಂಘಟನಾ ಕಾರ್ಯದರ್ಶಿ ವಿ.ಶ್ರೀನಿವಾಸ ಮಳಲಿ, ಕಾರ್ಯದರ್ಶಿ ಕೆ.ಪಿ.ಎಂ.ಗಣೇಶ್, ಅಖಿಲ ಭಾರತ ವೀರಶೈವ ಮಹಾಸಭಾ ಕಾರ್ಯದರ್ಶಿ ಮಹೇಶ್, ಸಿ.ನಾಗರಾಜ ಮತ್ತಿತರರಿದ್ದರು.

Share This Article
Leave a Comment

Leave a Reply

Your email address will not be published. Required fields are marked *