ಮರು ಪರೀಕ್ಷೆ ನಡೆಸದಂತೆ ಜಿ.ಎನ್.ಎಂ. ನರ್ಸಿಂಗ್ ವಿದ್ಯಾರ್ಥಿಗಳ ಪ್ರತಿಭಟನೆ

1 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ,(ಜ.18): ಜಿ.ಎನ್.ಎಂ. ನರ್ಸಿಂಗ್ ವಿದ್ಯಾರ್ಥಿಗಳು ಮರು ಪರೀಕ್ಷೆ ನಡೆಸಬಾರದೆಂದು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಸುಮಾರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಸುಡು ಬಿಸಿಲಿನಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದ ಗೇಟ್‍ನಲ್ಲಿ ಕುಳಿತು ಯಾರು ಒಳ ಹೋಗಲು ಹೊರ ಬರಲು ಅವಕಾಶ ನೀಡದ ನರ್ಸಿಂಗ್ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಯೆ ಸ್ಥಳಕ್ಕಾಗಮಿಸಿ ಮನವಿ ಸ್ವೀಕರಿಸುವಂತೆ ಪಟ್ಟು ಹಿಡಿದು ಘೋಷಣೆಗಳನ್ನು ಕೂಗಿದರು.

ಜಿಲ್ಲಾಧಿಕಾರಿ ವಿ.ಸಿ.ಯಲ್ಲಿದ್ದ ಕಾರಣ ಬರುವುದು ತಡವಾಗುತ್ತದೆನ್ನುವುದನ್ನು ಅರಿತ ಪ್ರತಿಭಟನಾನಿರತ ವಿದ್ಯಾರ್ಥಿಗಳು  ಮಧ್ಯಾಹ್ನ 2.30 ಗಂಟೆಯವರೆಗೆ ಸ್ಥಳ ಬಿಟ್ಟು ಕದಲದೆ ಕಾದಿದ್ದು, ಜಿಲ್ಲಾಧಿಕಾರಿಗೆ ಮನವಿ ಅರ್ಪಿಸಿ ಮರು ಪರೀಕ್ಷೆ ನಡೆಸದಂತೆ ಕೋರಿದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks