ಬೆಂಗಳೂರು: ನಿರ್ಮಾಪಕರು ಹಾಗೂ ಕಿಚ್ಚ ಸುದೀಪ್ ನಡುವೆ ನಡೆಯುತ್ತಿರುವ ಕಾಲ್ ಶೀಟ್ ವಾರ್ ಎಲ್ಲರಿಗೂ ಗೊತ್ತಿರುವ ವಿಚಾರವೆ. ಇದೀಗ ಆ ವಾರ್ ಕೋರ್ಟ್ ಮೆಟ್ಟಿಲೇರಿದೆ. ಕಿಚ್ಚ ಸುದೀಪ್ ಇಂದು ನ್ಯಾಯಲಯಕ್ಕೆ ಈ ಸಂಬಂಧ ಹಾಜರಾಗಿದ್ದರು.
ಇದೇ ವೇಳೆ ಮಾತನಾಡಿದ ಸುದೀಪ್, ಯಾರು ಏನೇ ಆರೋಪ ಮಾಡಿದ್ರು ಕೋರ್ಟ್ ನಿಂದ ಸರಿ ಉತ್ತರ ಸಿಗುತ್ತೆ. ಒಂದು ವಿಚಾರ ಹೇಳೋಕೆ ಇಷ್ಟಪಡ್ತೀನಿ. ದೇವ್ರು ಒಳ್ಳೆದ್ ಮಾಡ್ಲಿ.. ಒಂದಂತು ಸತ್ಯ. ಯಾವುದೇ ಸುಳ್ಳಿರಲಿ, ಸತ್ಯ ಇರಲಿ ಬಹಿರಂಗವಾಗಿ ಹೊರಗೆ ಬರಲೇ ಬೇಕು. ಸರಿಯಾದ ಮಾರ್ಗದಲ್ಲಿ ಹೋಗ್ತಿದ್ದೀನಿ ಅಂತಾ ನಾನು ಅಂದ್ಕೊಂಡಿದೀನಿ. ಕೋರ್ಟ್ ಗೆ ಹೋದ್ರೆ ಎಲ್ಲಾ ಸರಿ ಹೋಗುತ್ತೆ. ನಾನು ಕಲಾವಿದ ಆದ್ಮೇಲೆ ಎಲ್ಲರಿಗೂ ಸಹಾಯ ಮಾಡ್ತೀನಿ ಅಂತಾ ಚಾರಿಟಬಲ್ ಟ್ರಸ್ಟ್ ಓಪನ್ ಮಾಡಿಲ್ಲ. ಮಾಧ್ಯಮವನ್ನ ಸರಿಯಾಗಿ ಬಳಸಿಕೊಳ್ಳಬೇಕು. ಬಾಯಿ ಇದೆ ಅಂತಾ ಹೆಂಗ್ ಬೇಕು ಹಂಗೆ ಮಾತಾಡ್ಬಾರ್ದು. ನಾನು ಸರಿಯಾಗೆ ನಡ್ಕೊಂಡ್ ಬಂದಿದೀನಿ. ಎಲ್ಲರ ಆರೋಪಕ್ಕೆ ನಾನು ಉತ್ತರ
ಕೊಡಲ್ಲ.
ಎಲ್ಲಿ ಇತ್ಯರ್ಥ ಆಗ್ಬೇಕು ಅಲ್ಲಿ ಇತ್ಯರ್ಥ ಆಗುತ್ತೆ. ಅದ್ಕೆ ನಾನು ಕೋರ್ಟ್ ನಲ್ಲಿ ಬಂದೆ. ಜಾಕ್ ಮಂಜು ಏನ್ ಉತ್ತರ ಕೊಡಬೇಕಿತ್ತು ಕೊಟ್ಟಿದಾರೆ. ನಾನೇ ಬಂದು ಪತ್ರಿಕಾಗೋಷ್ಠಿ ಮಾಡಿದ್ರೆ ಅವ್ರಿಗೂ ನಂಗೂ ಏನ್ ವ್ಯತ್ಯಾಸ ಇರುತ್ತೆ. ನಾನು ಬೆಂಡಾಗಿ ಕೂಡ ಇನ್ನೊಬ್ರಿಗೆ ಕೆಟ್ಟ ಉದಾಹರಣೆ ಆಗ್ಬಾರ್ದು. ನಾನು ಸಂಪಾದನೆ ಮಾಡಿರೋ ಹೆಸರಾಗಲಿ, ಸ್ಟಾರ್ ಗಿರಿ ಆಗಲಿ ಯಾರಿಂದಲೂ ಅಳಿಸೋಕೆ ಆಗಲ್ಲ. ಹಂಗೇನಾದ್ರು ಆಗುತ್ತೆ ಅಂದ್ರೆ ನಾನು ಏನೂ ಮಾಡಿಲ್ಲ ಅಂತಾ ಅರ್ಥ..
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್‌ಐಆರ್…