ಬೆಂಗಳೂರು: ಚಿನ್ನ ಬೆಳ್ಳಿ ಬೆಲೆ ಏರಿಕೆಯತ್ತ ಮುಖ ಮಾಡಿದೆ. ಒಂದು ಗ್ರಾಂಗೆ ಸುಮಾರು 50 ರೂಪಾಯಿಯಷ್ಟು ಏರಿಕೆಯಾಗಿದ್ದು, ಶಾಕಿಂಗ್ ಎನಿಸಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 7,390 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ ಬೆಲೆಯಲ್ಲಿ 55 ರೂಪಾಯಿ ಏರಿಕೆಯಾಗಿದ್ದು, ಈಮೂಲಕ ಒಂದು ಗ್ರಾಂ ಚಿನ್ನದ ಬೆಲೆ 8,062 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 73,900 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 80,620 ರೂಪಾಯಿ ಆಗಿದೆ.

ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 1 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 7,390 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 7,405 ರೂಪಾಯಿ ಇದೆ.

ಇನ್ನು ವಿದೇಶಗಳಲ್ಲಿ10 ಗ್ರಾಂ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 71,090 ರೂಪಾಯಿ ಇದೆ. ಅಮೆರಿಕಾದಲ್ಲಿ 67,420 ಇದೆ. ಸೌದಿಯಲ್ಲಿ 70,940 ಇದೆ.
ಇನ್ನು ಬೆಳ್ಳಿ ಬೆಲೆಯಲ್ಲೂ ಅಲ್ಪ ಏರಿಕೆಯಾಗಿದೆ. ನಿನ್ನೆ 1 ರೂಪಾಯಿ ಏರಿಕೆಯಾಗಿದ್ದ ಬೆಳ್ಳಿ ಬೆಲೆ ಇಂದು ಹತ್ತು ಪೈಸೆಯಷ್ಟು ಏರಿಕೆಯಾಗಿದೆ. ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 95.50 ರೂಪಾಯಿ ಆಗಿದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 9,360 ರೂಪಾಯಿ ಇದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 9,360 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 10,110 ರೂಪಾಯಿ ಇದೆ.


