ಬೆಂಗಳೂರು; ಚಿನ್ನದ ದರದಲ್ಲಿ ಇಂದು ಕೂಡ ಏರಿಕೆಯಾಗಿದೆ. ಇಂದು 22 ಕ್ಯಾರಟ್ ನ ಒಂದು ಗ್ರಾಂಗೆ 55 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 9,130 ರೂಪಾಯಿ ಇದೆ. 24 ಕ್ಯಾರಟ್ ಅಪರಂಜಿ ಚಿನ್ನ ಕೂಡ 60 ರೂಪಾಯಿ ಏರಿಕೆಯಾಗಿದ್ದು, ಈ ಮೂಲಕ 9,960 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 91,300 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 99,600 ರೂಪಾಯಿ ಆಗಿದೆ.
ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 91,300 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 91,450 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 87,160 ರೂಪಾಯಿ ಇದೆ. ಅಮೆರಿಕಾದಲ್ಲಿ 86,710 ಇದೆ. ಸೌದಿಯಲ್ಲಿ 87,260 ರೂಪಾಯಿ ಇದೆ.
ಬೆಳ್ಳಿ ಬೆಲೆ 99 ಪರ್ ಗ್ರಾಂ ಇದ್ದು, ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 9,900 ರೂಪಾಯಿ ಇದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 9,900 ರೂಪಾಯಿ ಆಗಿದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 9,900 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 11,100 ರೂಪಾಯಿ ಇದೆ.


