Connect with us

Hi, what are you looking for?

ಪ್ರಮುಖ ಸುದ್ದಿ

ದಾವಣಗೆರೆ ವಿವಿಯಲ್ಲಿ ಚಿನ್ನದ ಹಕ್ಕಿಗಳು!

ದಾವಣಗೆರೆ: ಇಂದು ನಡೆದ ದಾವಣಗೆರೆ ವಿಶ್ವವಿದ್ಯಾನಿಲಯದ 8ನೇ ಘಟಿಕೋತ್ಸವದಲ್ಲಿ ಪದವಿ, ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕಗಳಿಸಿ ಸಾಧನೆ ಮಾಡಿದ 44 ವಿದ್ಯಾರ್ಥಿಗಳು 74 ಚಿನ್ನದ ಪದಕಗಳನ್ನು ಪಡೆಯುವ ಮೂಲಕ ಇಂದು ಸಂಭ್ರಮಿಸಿದರು.

34 ವಿದ್ಯಾರ್ಥಿನಿಯರು ಪದಕಗಳನ್ನು ಹಂಚಿಕೊಂಡಿದ್ದಾರೆ. ಗಣಿತ ವಿಭಾಗದ ವಿದ್ಯಾರ್ಥಿನಿ ಮೇಘ ಎನ್‍ಎಸ್. ನಾಲ್ಕು ಪದಕಗಳೊಂದಿಗೆ ಚಿನ್ನದ ಹುಡುಗಿ ಗೌರವಕ್ಕೆ ಪಾತ್ರರಾಗಿದ್ದಾರೆ. ಒಟ್ಟು 74 ಸ್ವರ್ಣ ಪದಕಗಳನ್ನು 44 ವಿದ್ಯಾರ್ಥಿಗಳು ಹಂಚಿಕೊಂಡಿದ್ದಾರೆ. ಸ್ನಾತಕ ವಿಭಾಗದಲ್ಲಿ 19 ಸ್ವರ್ಣಪದಕಗಳನ್ನು ಮೂರು ಪುರುಷ ಮತ್ತು ಒಂಭತ್ತು ವಿದ್ಯಾರ್ಥಿನಿಯರಿಗೆ ಪದಕ ಪ್ರದಾನ ಮಾಡಲಾಯಿತು.

ಸ್ನಾತಕೋತ್ತರ ಪದವಿಯಲ್ಲಿ 29 ವಿದ್ಯಾರ್ಥಿಗಳು 52 ಪದಕಗಳನ್ನು ಗಳಿಸಿದ್ದಾರೆ. ಇವರಲ್ಲಿ 7 ಪುರುಷ ಹಾಗೂ 22 ಮಹಿಳಾ ವಿದ್ಯಾರ್ಥಿಗಳು ಇದ್ದಾರೆ. ಚಿನ್ನದ ಪದಕ ಗಳಿಕೆಯಲ್ಲಿ ಮಹಿಳಾ ವಿದ್ಯಾರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಸ್ನಾತಕ ಪದವಿಯ 11 ಹಾಗೂ ಸ್ನಾತಕೋತ್ತರ ಪದವಿಯ 24 ಸೇರಿ ಒಟ್ಟು 44 ವಿದ್ಯಾರ್ಥಿಗಳು ಪ್ರಥಮ ರ್ಯಾಂಕ್ ಗಳಿಸಿದ್ದಾರೆ. ಈ ಬಾರಿ ವಿವಿಧ ವಿಭಾಗಗಳಲ್ಲಿ 7 ಜನರಿಗೆ ಪಿಎಚ್.ಡಿ ಹಾಗೂ ಇಬ್ಬರಿಗೆ ಎಂ.ಫಿಲ್ ಪದವಿಯನ್ನು ಪ್ರದಾನ ಮಾಡಲಾಯಿತು.

ಗೌರವ ಡಾಕ್ಟರೇಟ್ ಪದವಿ : ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಇಬ್ಬರು ಗಣ್ಯರಾದ ಸಂಸದ ಜಿ.ಎಂ.ಸಿದ್ದೇಶ್ವರ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಧ್ಯಾಪಕ ಡಾ. ಎಂ.ಕೆ. ರಮೇಶ್ ಅವರಿಗೆ ಗೌರವ ಡಾಕ್ಟರೇಟ್ ಪುರಸ್ಕಾರ ನೀಡಲಾಯಿತು.

ವಿಶ್ವವಿದ್ಯಾನಿಲಯವು 2019-20ರ ಅವಧಿಯಲ್ಲಿ ನಡೆಸಿದ ಪರೀಕ್ಷೆಯಲ್ಲಿ ತೇರ್ಗಡೆಯಾದ 11,193 ಪದವಿಯ ಹಾಗೂ 2,014 ಸ್ನಾತಕೋತ್ತರ ವಿದ್ಯಾರ್ಥಿಗಳು ಪದವಿ ಇಂದು ಪದವಿ ಪಡೆದರು. ಈ ಬಾರಿ ಪದವಿಯಲ್ಲಿ 6,873 ಮಹಿಳೆಯರು ಹಾಗೂ 4,319 ಪುರುಷ ವಿದ್ಯಾರ್ಥಿಗಳು ಬಿಎ, ಬಿಕಾಂ, ಬಿಬಿಎಂ, ಬಿಎಸ್ಸಿ, ಬಿಸಿಎ, ಬಿಎಸ್‍ಡಬ್ಲೂ, ಬಿವಿಎ, ಬಿ.ಇಡಿ ಹಾಗೂ ಬಿಬಿಇಡಿ ಪದವಿ, ಸ್ನಾತಕೋತ್ತರ ವಿಭಾಗದಲ್ಲಿ 1,189 ಮಹಿಳಾ ಮತ್ತು 824 ಪುರುಷ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪ್ರದಾನ ಮಾಡಲಾಯಿತು.

ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್‍ನ ಸಂಸ್ಥಾಪಕ ಅಧ್ಯಕ್ಷರು ಹಾಗೂ ಶಿಕ್ಷಣ ತಜ್ಞರಾದ ಡಾ. ಗುರುರಾಜ್ ಕರಜಗಿ ಅವರು ಘಟಿಕೋತ್ಸವ ಭಾಷಣ ಮಾಡಿದರು. ಕುಲಪತಿ ಪ್ರೊ. ಶರಣಪ್ಪ ಹಲಸೆ, ಕುಲಸಚಿವರಾದ ಪೆÇ್ರ. ಅನಿತಾ ಹೆಚ್.ಎಸ್, ಕುಲಸಚಿವ ಪೆÇ್ರ. ಗಾಯತ್ರಿ ದೇವರಾಜ, ಹಣಕಾಸು ಅಧಿಕಾರಿ ಪ್ರಿಯಾಂಕ.ಡಿ, ಸಿಂಡಿಕೇಟ್ ಸದಸ್ಯರಾದ ವಿಜಯಲಕ್ಷ್ಮೀ, ವೀರಭದ್ರಯ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಸುದ್ದಿಒನ್, ದಾವಣಗೆರೆ,(ಜೂನ್.15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರ ವರದಿಯಲ್ಲಿ 183 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 47668 ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ ದಾವಣಗೆರೆ 69...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ದಾವಣಗೆರೆ

ದಾವಣಗೆರೆ: ಎತ್ತಿನಗಾಡಿ, ಬೈಕ್ ನಲ್ಲಿ ಹೊಡೆದ ಮರಳು ಸೀಜ್‌ ಮಾಡಲು‌ ನಾನು ಬಿಡುವುದಿಲ್ಲ. ನಾನು ಬಡವರ ಪರವಾಗಿದ್ದೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಮರಳು ಸಂಗ್ರಹ ಅಡ್ಡೆಗಳ ಮೇಲೆ...

ಪ್ರಮುಖ ಸುದ್ದಿ

ದಾವಣಗೆರೆ: ಕೊರೋನಾ ಹಿನ್ನೆಲೆಯಲ್ಲಿ ಇದೇ 16 ರಂದು ಇರುವ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳದ ಹಿನ್ನೆಲೆಯಲ್ಲಿ, ಅಭಿಮಾನಿಗಳು, ಜನರು ಶುಭಾಷಯ ಕೋರಲು ಗುಂಪಾಗಿ ಆಗಮಿಸದೆ, ತಾವು ಇದ್ದಲ್ಲಿಯೇ ಜನ್ಮದಿನಕ್ಕೆ ಹಾರೈಸಬೇಕೆಂದು ಶಾಸಕ ಶಾಮನೂರು ಶಿವಶಂಕರಪ್ಪ...

ಪ್ರಮುಖ ಸುದ್ದಿ

ಸುದ್ದಿಒನ್, ದಾವಣಗೆರೆ,(ಜೂನ್.14): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 200 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 47485 ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ ದಾವಣಗೆರೆ 109...

ಪ್ರಮುಖ ಸುದ್ದಿ

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 6835 ಹೊಸ ಪ್ರಕರಣ ಪತ್ತೆಯಾಗಿದೆ. 31828 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 117914 RTPCR ಟೆಸ್ಟ್ ಸೇರಿದಂತೆ ಒಟ್ಟು,...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂನ್.14): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 195 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33902 ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 31 ಚಳ್ಳಕೆರೆ...

ದಾವಣಗೆರೆ

ದಾವಣಗೆರೆ: ಮರಳು ಗಣಿಗಾರಿಕೆ ಮಾಡೋರೇನು ಅತ್ಯಾಚಾರ ಅಥವಾ ಕೊಲೆ ಮಾಡಿದ್ದಾರಾ..? ಕರೋನಾದ ಈ ಸಂದರ್ಭದಲ್ಲಿ ಹೊಟ್ಟೆ ಪಾಡಿಗೆ ಅವರು ಮರಳು ಗಣಿಗಾರಿಕೆ ಮಾಡುತಿದ್ದಾರೆ. ಅವರ ತಂಟೆಗೆ ಬಂದರೆ ನಾನು ಸುಮ್ಮನಿರುವುದಿಲ್ಲ ಎಂದು ಸಿಎಂ...

ಪ್ರಮುಖ ಸುದ್ದಿ

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 7810 ಹೊಸ ಪ್ರಕರಣ ಪತ್ತೆಯಾಗಿದೆ. 48776 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 80841 RTPCR ಟೆಸ್ಟ್ ಸೇರಿದಂತೆ ಒಟ್ಟು...

error: Content is protected !!