ಇಂದು ಚಿನ್ನದ ಬೆಲೆಯಲ್ಲಿ 125 ರೂಪಾಯಿ ಇಳಿಕೆ..!

ಬೆಂಗಳೂರು: ಇಂದು ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. 22 ಕ್ಯಾರಟ್ ನ ಒಂದು ಗ್ರಾಂಗೆ 125 ರೂಪಾಯಿ ಇಳಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 9255 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ ಕೂಡ 136 ರೂಪಾಯಿ ಇಳಿಕೆಯಾಗಿದ್ದು, ಈ ಮೂಲಕ 10,097 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 92,550 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 1,00,970 ರೂಪಾಯಿ ಆಗಿದೆ.

 

ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 92,550 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 92,700 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 88,730 ರೂಪಾಯಿ ಇದೆ. ಅಮೆರಿಕಾದಲ್ಲಿ 91,450 ಇದೆ. ಸೌದಿಯಲ್ಲಿ 88,990 ಇದೆ.

ಬೆಳ್ಳಿ ಬೆಲೆಯಲ್ಲೂ 1 ರೂಪಾಯಿ ಇಳಿಕೆಯಾಗಿದೆ. ಹೀಗಾಗಿ ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 118 ರೂಪಾಯಿ ಇದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 11,800 ರೂಪಾಯಿ ಆಗಿದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 11,800 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 12,800 ರೂಪಾಯಿ ಇದೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks