ಬೆಂಗಳೂರು: ಇಂದು ಕೂಡ ಚಿನ್ನದ ಬೆಲೆ ಮತ್ತೆ ಏರಿಕೆಯಾಗಿದೆ. ಒಂದು ಗ್ರಾಂಗೆ 10 ರೂಪಾಯಿಯಷ್ಟು ಏರಿಕೆಯಾಗಿದ್ದು, ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 8,050 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ ಕೂಡ 11 ರೂಪಾಯಿ ಏರಿಕೆಯಾಗಿದ್ದು, ಈ ಮೂಲಕ 8,782 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 80,500 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 87,820 ರೂಪಾಯಿ ಆಗಿದೆ.
ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 80,500 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 80,650 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 77,520 ರೂಪಾಯಿ ಇದೆ. ಅಮೆರಿಕಾದಲ್ಲಿ 77,230 ಇದೆ. ಸೌದಿಯಲ್ಲಿ 77,220 ಇದೆ.
ಬೆಳ್ಳಿ ಬೆಲೆಯಲ್ಲಿ 10 ಪೈಸೆಯಷ್ಟು ಇಳಿಕೆಯಾಗಿದ್ದು, ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 99 ರೂಪಾಯಿ ಆಗಿದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 9,900 ರೂಪಾಯಿ ಆಗಿದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 9,900 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 10,800 ರೂಪಾಯಿ ಇದೆ.
ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 15 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಶನಿವಾರ, ಮಾರ್ಚ್. 15 ) ಹತ್ತಿ ಮಾರುಕಟ್ಟೆ…
ಚಿತ್ರದುರ್ಗ; ನಗರ ಠಾಣೆ ಪಿಎಸ್ಐ ಗಾದಿಲಿಂಗಪ್ಪ ಮೇಲೆ ತುಮಕೂರು ಜಿಲ್ಲೆಯ ಮಧುಗಿರಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ…
ಬೆಂಗಳೂರು; ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಈಗಾಗಲೇ…
ಈ ರಾಶಿಯವರು ವ್ಯಾಪಾರ ವೈಹಿವಾಟಗಳಲ್ಲಿ ಮುನ್ನಡೆ ಸಾಧಿಸಲಿದ್ದಾರೆ, ಈ ರಾಶಿಯವರು ಸೋಲಿಲ್ಲದ ಸರದಾರನಾಗಿ ಮುಟ್ಟಿದ್ದೆಲ್ಲ ಚಿನ್ನ. ಶನಿವಾರದ ರಾಶಿ ಭವಿಷ್ಯ…
ಸುದ್ದಿಒನ್, ಹಿರಿಯೂರು, ಮಾರ್ಚ್. 14 : ತಾಲ್ಲೂಕಿನ ಜವಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಉಪ ಸಭಾಪತಿ ರುದ್ರಪ್ಪ ಲಮಾಣಿಯವರು…
ಸುದ್ದಿಒನ್, ಜಗಳೂರು, ಮಾರ್ಚ್. 14 : ಶ್ರೀ ಶರಣ ಬಸವೇಶ್ವರ ದಾಸೋಹ ಮಠ, ದೊಣ್ಣೆಹಳ್ಳಿ, ಸರ್ಕಾರಿ ದಂತ ಕಾಲೇಜು…