ಬೆಂಗಳೂರು: ಇಂದು ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆಯಾಗಿದೆ. 22 ಕ್ಯಾರಟ್ ನ ಒಂದು ಗ್ರಾಂಗೆ 75 ರೂಪಾಯಿ ಇಳಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ ,225 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ ಕೂಡ 82 ರೂಪಾಯಿ ಇಳಿಕೆಯಾಗಿದ್ದು, ಈ ಮೂಲಕ 12,246 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 1,12,250 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 1,22,460 ರೂಪಾಯಿ ಆಗಿದೆ.
ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 11,225 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 11,240 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 10,707 ರೂಪಾಯಿ ಇದೆ. ಅಮೆರಿಕಾದಲ್ಲಿ 10,956 ಇದೆ. ಸೌದಿಯಲ್ಲಿ 10,673 ರೂಪಾಯಿ ಇದೆ.
ಬೆಳ್ಳಿ ಬೆಲೆಯಲ್ಲಿ 15ರಷ್ಟು ಇಳಿಕೆಯಾಗಿದೆ. ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 152 ರೂಪಾಯಿ ಇದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 15,100 ರೂಪಾಯಿ ಆಗಿದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಬೆಳ್ಳಿ ಬೆಲೆ 16,500 ರೂಪಾಯಿ ಇದೆ. ಈ ಮೂಲಕ ಕೆಲವೊಂದು ಭಾಗದಲ್ಲಿ ಬೆಳ್ಳಿ ಬೆಲೆಯಲ್ಲಿ ಏರಿಳಿತ ಕಂಡಿದೆ.


