ಬೆಂಗಳೂರು; ಕಳೆದ ಕೆಲವು ದಿನಗಳ ಹಿಂದಷ್ಟೇ ಚಿನ್ನದ ಬೆಲೆ ಏರಿಕೆಯತ್ತಲೇ ಸಾಗುತ್ತಾ ಇತ್ತು. ಚಿನ್ನದ ಮೇಲಿನ ಆಸೆಯನ್ನೇ ಬಿಟ್ಟು ಬಿಡಬೇಕು ಎನ್ನುವಷ್ಟು. ಸದ್ಯ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ. ಇಂದು 22 ಕ್ಯಾರಟ್ ನ ಒಂದು ಗ್ರಾಂಗೆ 27 ರೂಪಾಯಿ ಇಳಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 9,895 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ ಕೂಡ 25 ರೂಪಾಯಿ ಇಳಿಕೆಯಾಗಿದ್ದು, ಈ ಮೂಲಕ 9,070 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 90,700 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 99,220 ರೂಪಾಯಿ ಆಗಿದೆ.
ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 90,700 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 90,850 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 86,180 ರೂಪಾಯಿ ಇದೆ. ಅಮೆರಿಕಾದಲ್ಲಿ 88,530 ಇದೆ. ಸೌದಿಯಲ್ಲಿ 86,380 ಇದೆ.
ಬೆಳ್ಳಿ ಬೆಲೆಯಲ್ಲೂ ಒಂದು ರೂಪಾಯಿ ಇಳಿಕೆಯಾಗಿದ್ದು, ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 108 ರೂಪಾಯಿ ಇದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 10,800 ರೂಪಾಯಿ ಆಗಿದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 11,000 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 11,800 ರೂಪಾಯಿ ಇದೆ.


