ಚಿನ್ನದ ಬೆಲೆಯಲ್ಲಿ ಇಂದು ಕೂಡ ಹೆಚ್ಚಳ..!

 

ಬೆಂಗಳೂರು: ನಿನ್ನೆಯಷ್ಟೇ 40 ರೂಪಾಯಿ ಏರಿಕೆಯಾಗಿದ್ದ ಚಿನ್ನದ ದರ, ಇಂದು ನೋಡಿದ್ರೆ ಮತ್ತೆ ಏರಿಕೆಯಾಗಿದೆ. 22 ಕ್ಯಾರಟ್ ನ ಒಂದು ಗ್ರಾಂಗೆ 20 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 8,310 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ ಕೂಡ 22 ರೂಪಾಯಿ ಏರಿಕೆಯಾಗಿದ್ದು, ಈ ಮೂಲಕ 9,066 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 83,100 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 90,660 ರೂಪಾಯಿ ಆಗಿದೆ.

 

ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 83,100 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 83,250 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 79,400 ರೂಪಾಯಿ ಇದೆ. ಅಮೆರಿಕಾದಲ್ಲಿ 79,360 ಇದೆ. ಸೌದಿಯಲ್ಲಿ 79,570 ಇದೆ.

 

ಬೆಳ್ಳಿ ಬೆಲೆಯಲ್ಲೂ ಏರಿಕೆಯಾಗಿದ್ದು, 10 ಪೈಸೆ ಏರಿಕೆಯಾಗಿದ್ದು, ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 105.10 ರೂಪಾಯಿ ಆಗಿದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 10,500 ರೂಪಾಯಿ ಆಗಿದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 10,500 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 11,400 ರೂಪಾಯಿ ಇದೆ.

suddionenews

Recent Posts

ಈ ಪುಟಾಣಿಯ ಚಿಕಿತ್ಸೆಗೆ 16 ಕೋಟಿಯ ಅಗತ್ಯ ; ಕೈಜೋಡಿಸಿದ ಕಿಚ್ಚ ಸುದೀಪ್

ಬೆಂಗಳೂರು; ಮಕ್ಕಳೆಂದರೆ ಯಾವ ಪೋಷಕರಿಗೆ ತಾನೇ ಇಷ್ಟ ಇಲ್ಲ ಹೇಳಿ. ಮಕ್ಕಳಾದ ಮೇಲೆ ಅವರ ಉಜ್ವಲ ಭವಿಷ್ಯಕ್ಕಾಗಿಯೇ ಹೋರಾಡುತ್ತಾರೆ. ಅವರ…

35 minutes ago

ಚಿತ್ರದುರ್ಗ : ಯುಗಾದಿ ಹಬ್ಬ ಆಚರಣೆ : ಚಂದ್ರನನ್ನು ಕಣ್ತುಂಬಿಕೊಂಡ ಜನತೆ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 31 : ಯುಗಾದಿ ಹಬ್ಬವನ್ನು ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಎರಡು ದಿನ ಸಂಭ್ರಮದಿಂದ ಆಚರಿಸಲಾಯಿತು.…

59 minutes ago

ಚಿತ್ರದುರ್ಗ : ಯುಗಾದಿ ವೇಳೆ ಇಸ್ಪೀಟ್ ಜೂಜಾಟ ಅಡ್ಡೆಗಳ ಮೇಲೆ ಪೊಲೀಸ್ ದಾಳಿ : 575 ಜನ ಮತ್ತು 7 ಲಕ್ಷ ವಶಕ್ಕೆ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 31 : ಜಿಲ್ಲೆಯಾದ್ಯಂತ ಯುಗಾದಿ ಹಬ್ಬದ ಪ್ರಯುಕ್ತ ಇಸ್ಪೀಟ್ ಜೂಜಾಟದ ಅಡ್ಡೆಗಳ ಮೇಲೆ ಪೊಲೀಸರು ಮಾರ್ಚ್…

2 hours ago

ಚಿತ್ರದುರ್ಗ : ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಯುಗಾದಿ ಹಬ್ಬ ಆಚರಣೆ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 31 : ಗೋನೂರು ಸಮೀಪವಿರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಯುಗಾದಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು. ವಿಶೇಷವಾದ…

3 hours ago

ಚಿತ್ರದುರ್ಗ : ಮಡಿವಾಳರ ವಿದ್ಯಾರ್ಥಿನಿಲಯ ನಾಮಫಲಕ ಉದ್ಘಾಟನೆ

ವರದಿ ಮತ್ತು ಫೋಟೋ ಕೃಪೆ                      ಕೆ.ಎಂ.ಮುತ್ತುಸ್ವಾಮಿ…

3 hours ago

ಯುವಕರು ರಂಗಭೂಮಿ ಬಗ್ಗೆ ಹೆಚ್ಚಿನ ಆಸಕ್ತಿ ತೋರಬೇಕು : ಆರ್.ಶೇಷಣ್ಣಕುಮಾರ್

ವರದಿ ಮತ್ತು ಫೋಟೋ ಕೃಪೆ                    ಕೆ.ಎಂ.ಮುತ್ತುಸ್ವಾಮಿ ಕಣ್ಣನ್…

3 hours ago