ಬೆಂಗಳೂರು; ಚಿನ್ನದ ದರದಲ್ಲಿಮತ್ತೆ ಏರಿಕೆ ಕಂಡಿದ್ದು, ಇಂದು 22 ಕ್ಯಾರಟ್ ನ ಒಂದು ಗ್ರಾಂಗೆ 45 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 8,975 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ ಕೂಡ 45 ರೂಪಾಯಿ ಇಳಿಕೆಯಾಗಿದ್ದು, ಈ ಮೂಲಕ 9,791 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 89,750 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 97,910 ರೂಪಾಯಿ ಆಗಿದೆ.
ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 89,750 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 89,900 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 85,890 ರೂಪಾಯಿ ಇದೆ. ಅಮೆರಿಕಾದಲ್ಲಿ 86,100 ಇದೆ. ಸೌದಿಯಲ್ಲಿ 86,340 ಇದೆ.
ಬೆಳ್ಳಿ ಬೆಲೆಯಲ್ಲಿ 1 ರೂಪಾಯಿ ಬೆಲೆ ಏರಿಕೆಯಾಗಿದೆ. ಈ ಮೂಲಕ 101 ಏರಿಕೆಯಾಗಿದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 10,100 ರೂಪಾಯಿ ಆಗಿದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 10,100 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 11,200 ರೂಪಾಯಿ ಇದೆ.










