ಬೆಂಗಳೂರು: ನಿನ್ನೆ ಒಂದೇ ದಿನ ಚಿನ್ನದ ದರ 55 ರೂಪಾಯಿ ಏರಿಕೆಯಾಗಿತ್ತು. ಇಂದು ಮತ್ತೆ ಇಳಿಕೆಯಾಗಿದೆ. ಒಂದು ಗ್ರಾಂಗೆ ಸುಮಾರು 45 ರೂಪಾಯಿಯಷ್ಟು ಇಳಿಕೆಯಾಗಿದ್ದು, ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 8,020 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ ಕೂಡ 49 ರೂಪಾಯಿ ಇಳಿಕೆಯಾಗಿದ್ದು, ಈ ಮೂಲಕ 8,749 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 80,200 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 87,490 ರೂಪಾಯಿ ಆಗಿದೆ.
ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 80,200 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 80,350 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 76,990 ರೂಪಾಯಿ ಇದೆ. ಅಮೆರಿಕಾದಲ್ಲಿ 77,380 ಇದೆ. ಸೌದಿಯಲ್ಲಿ 77,200 ಇದೆ.
ಬೆಳ್ಳಿ ಬೆಲೆಯಲ್ಲಿ ಒಂದು ರೂಪಾಯಿ ಏರಿಕೆಯಾಗಿದ್ದು, ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 99 ರೂಪಾಯಿ ಆಗಿದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 9,801 ರೂಪಾಯಿ ಆಗಿದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 9,801 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 10,700 ರೂಪಾಯಿ ಇದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲದರಲ್ಲೂ ಬೆಲೆ ಏರಿಕೆ ಮಾಡಿ ಬಡ, ಮಧ್ಯಮವರ್ಗದ ಜನರು ಬದುಕು ನಡೆಸುವುದು ಹೇಗೆ ಎಂಬ ಪ್ರಶ್ನೆಯನ್ನು…
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 03 : ಇತ್ತೀಚಿನ ದಿನಗಳಲ್ಲಿ ಚಿರತೆಗಳು ಸೇರಿದಂತೆ ಕಾಡು ಪ್ರಾಣಿಗಳು ಕಾಡು ಬಿಟ್ಟು ನಾಡಿಗೆ ಬರುವುದು…
ಚಿತ್ರದುರ್ಗ. ಏ.03: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಾಲಿಬಾಲ್, ಅಥ್ಲೆಟಿಕ್ಸ್ ಮತ್ತು ಷಟಲ್ ಬ್ಯಾಡ್ಮಿಂಟನ್ ಕ್ರೀಡೆಗಳಿಗೆ ಸಂಬಂಧಿಸಿದಂತೆ,…
ಸುದ್ದಿಒನ್ : ಚಿತ್ರದುರ್ಗ, ಏಪ್ರಿಲ್. 03 : ಈ ವರ್ಷ ಫೆಬ್ರವರಿಯಿಂದಲೇ ಆರಂಭವಾದ ಬೇಸಿಗೆಯ ಬಿಸಿಲಿನ ತಾಪಕ್ಕೆ ತತ್ತರಿಸಿದ್ದ ಜನತೆಗೆ…
ಸುದ್ದಿಒನ್, ಹಿರಿಯೂರು, ಏಪ್ರಿಲ್. 02 : ತಾಲ್ಲೂಕಿನ ಸೂರಪ್ಪನಹಟ್ಟಿ ಗ್ರಾಮದಲ್ಲಿ ಹೊನ್ನಾರು ಹೊಡೆಯುವ ಪದ್ದತಿ ನಡೆದುಕೊಂಡು ಬಂದಿದೆ. ಹಳ್ಳಿಗಳಲ್ಲಿ ರೈತರು…
ಬೆಂಗಳೂರು; ಅನಾರೋಗ್ಯದಿಂದ ವಿಶ್ರಾಂತಿ ಪಡೆಯುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಬಹಳ ದಿನಗಳ ಬಳಿಕ ಇದೀಗ ದೆಹಲಿಗೆ ಭೇಟಿ…