Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೈತರಿಗೆ ಸುವರ್ಣಾವಕಾಶ: ಕಟಾವು ಯಂತ್ರ ಖರೀದಿಗೆ ಭಾರಿ ಅನುದಾನ

---Advertisement---

ರಾಜ್ಯದಲ್ಲಿ ಕೃಷಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಕೂಲಿ ಕಾರ್ಮಿಕರ ಕೊರತೆಯನ್ನು ನಿವಾರಿಸಿ, ಬೆಳೆಗಳ ಕಟಾವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮಹತ್ವದ ಯೋಜನೆ ಜಾರಿಗೆ ತಂದಿದೆ. 2026–27ನೇ ಸಾಲಿನ ‘ಹಾರ್ವೆಸ್ಟರ್ ಹಬ್ ಘಟಕ ಯೋಜನೆ’ ಅಡಿಯಲ್ಲಿ ರೈತರಿಗೆ ಹಾರ್ವೆಸ್ಟರ್ ಹಾಗೂ ವಿವಿಧ ಆಧುನಿಕ ಕೃಷಿ ಯಂತ್ರೋಪಕರಣಗಳ ಖರೀದಿಗೆ ಭಾರಿ ಸಬ್ಸಿಡಿ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಯೋಜನೆಯಿಂದ ಸಣ್ಣ ಹಾಗೂ ಮಧ್ಯಮ ರೈತರು ಕಡಿಮೆ ವೆಚ್ಚದಲ್ಲಿ ಆಧುನಿಕ ಕೃಷಿ ಯಂತ್ರೋಪಕರಣಗಳ ಸೇವೆಯನ್ನು ಪಡೆಯಲು ಸಾಧ್ಯವಾಗಲಿದೆ. ಯೋಜನೆಯಡಿ ಕಬ್ಬು ಕಟಾವು ಯಂತ್ರ, ಸೈಲೇಜ್ ಕಟಾವು ಮತ್ತು ಸೈಲೇಜ್ ತಯಾರಿಕಾ ಯಂತ್ರ, ರಾಗಿ ಹಾಗೂ ಭತ್ತ ಕಟಾವು ಯಂತ್ರ ಸೇರಿದಂತೆ ವಿವಿಧ ಬೆಳೆಗಳಿಗೆ ಬಳಸುವ ಹಾರ್ವೆಸ್ಟರ್‌ಗಳನ್ನು ಖರೀದಿಸಬಹುದು.ಸಾಮಾನ್ಯ ವರ್ಗದ ರೈತರಿಗೆ ಯಂತ್ರದ ಒಟ್ಟು ವೆಚ್ಚದ ಶೇ.50ರಷ್ಟು ಅಥವಾ ಗರಿಷ್ಠ ₹40 ಲಕ್ಷದವರೆಗೆ ಸಬ್ಸಿಡಿ ದೊರೆಯಲಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರು, ರೈತ ಉತ್ಪಾದಕರ ಸಂಸ್ಥೆಗಳು (FPO), ನೋಂದಾಯಿತ ಕೃಷಿ ಸಂಘಗಳು ಹಾಗೂ ಸಹಕಾರಿ ಸಂಸ್ಥೆಗಳಿಗೆ ಶೇ.70ರಷ್ಟು ಕ್ರೆಡಿಟ್-ಲಿಂಕ್ಡ್ ಬ್ಯಾಕ್‌ಎಂಡೆಡ್ ಸಬ್ಸಿಡಿ ನೀಡಲಾಗುತ್ತದೆ.

ವೈಯಕ್ತಿಕ ರೈತರ ಜೊತೆಗೆ ರೈತ ಉತ್ಪಾದಕರ ಸಂಸ್ಥೆಗಳು, ಕೃಷಿ ಸಂಘಗಳು, ಸಹಕಾರಿ ಸಂಘಗಳು ಹಾಗೂ ಕೃಷಿ ಉದ್ಯಮಿಗಳೂ ಈ ಯೋಜನೆಯ ಪ್ರಯೋಜನ ಪಡೆಯಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಪಹಣಿ/ಆರ್‌ಟಿಸಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಬ್ಯಾಂಕ್ ಪಾಸ್‌ಬುಕ್ ಹಾಗೂ ಸಕ್ರಿಯ ಮೊಬೈಲ್ ಸಂಖ್ಯೆ ಕಡ್ಡಾಯವಾಗಿರುತ್ತದೆ.ಈ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 30, 2026 ಕೊನೆಯ ದಿನವಾಗಿದೆ. ಆಸಕ್ತ ರೈತರು ತಮ್ಮ ಜಿಲ್ಲೆಯ ಅಥವಾ ತಾಲೂಕಿನ ಕೃಷಿ ಇಲಾಖೆ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಯೋಜನೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಲಭ್ಯವಿದ್ದರೂ, ಆಯಾ ಜಿಲ್ಲೆಗಳಿಗೆ ಲಭ್ಯವಾಗುವ ಅನುದಾನದ ಆಧಾರದ ಮೇಲೆ ಅನುಷ್ಠಾನಗೊಳ್ಳಲಿದೆ. ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ (JDA) ಕಚೇರಿಯನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆ ಸೂಚಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now