Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೊಲ್ಲ-ಕಾಡುಗೊಲ್ಲ ಅಭಿವೃದ್ದಿ ನಿಗಮ ಸಲ್ಲದು ;  ಡಾ.ಮಲ್ಲಿಕಾರ್ಜನ ಕಲಮರಹಳ್ಳಿ

Facebook
Twitter
Telegram
WhatsApp

ವರದಿ : ಸುರೇಶ್ ಪಟ್ಟಣ್

ಚಿತ್ರದುರ್ಗ, (ಡಿ.06) : ಈಗ ಸ್ಥಾಪನೆ ಮಾಡಿರುವ ಕಾಡುಗೊಲ್ಲ ಅಭಿವೃದ್ದಿ ನಿಗಮವನ್ನು ಯಾವುದೇ ಕಾರಣಕ್ಕೂ ಹಾಗೂ ಯಾವುದೇ ಒತ್ತಡಕ್ಕೆ ಮಣಿದು ಅದನ್ನು ಗೊಲ್ಲ-ಕಾಡುಗೊಲ್ಲ ಅಭಿವೃದ್ದಿ ನಿಗಮ ಎಂದು ನಾಮಕರಣ ಮಾಡಬಾರದೆಂದು ಸರ್ಕಾರವನ್ನು ನಾಡೋಜ ಸಿರಿಯಜ್ಜಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಡಾ.ಮಲ್ಲಿಕಾರ್ಜನ ಕಲಮರಹಳ್ಳಿ ಆಗ್ರಹಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  ಹಿಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ನವರು ಶಿರಾ ಉಪ ಚುನಾವಣೆಯಲ್ಲಿ ಕಾಡುಗೊಲ್ಲ ಅಭಿವೃದ್ದಿ ನಿಗವನ್ನು ಸ್ಥಾಪನೆ ಮಾಡುವುದಾಗಿ ಹೇಳಿ ನೋಟೀಫಿಕೇಷನ್ ಹೊರಡಿಸಿದರು.

ನಂತರ ಹಿರಿಯೂರು ಶಾಸಕಿ ಪೂರ್ಣಿಮ ಶ್ರೀನಿವಾಸ್ ರವರು ಒತ್ತಡಕ್ಕೆ ಮಣಿದು ಕಾಡುಗೊಲ್ಲ ಎಂಬುದನ್ನು ತೆಗೆದು ಗೊಲ್ಲ ಅಭಿವೃದ್ದಿ ನಿಗಮ ಎಂದು ಹೊಸ ಹೆಸರಿನೊಂದಿಗೆ ಅಧಿಕೃತ ಆದೇಶವನ್ನು ಹೂರಡಿಸಲಾಯಿತು. ಇದರಿಂದ ಕಾಡುಗೊಲ್ಲ ಸಮುದಾಯಕ್ಕೆ ತಣ್ನೀರು ಎರಚಿದಂತೆ ಆಯಿತು.

ನಮ್ಮ ಹಕ್ಕುಗಳಿಗಾಗಿ ಹೋರಾಟವನ್ನು ಮಾಡಿದವರು ನಾವಾದರೂ ಅದರ ಉಪಯೋಗವನ್ನು ಮಾತ್ರ ಹೆಚ್ಚಿನ ಪ್ರಮಾಣದಲ್ಲಿ ಗೊಲ್ಲ ಸಮುದಾಯದವರು ಪಡೆಯುವಂತಾಗಿದೆ ಎಂದು ಆರೋಪಿಸಿದರು.

ಸಾರ್ವತ್ರಿಕ ಚುನಾವಣೆಗೆ ಮುನ್ನಾ ಪೂರ್ಣಿಮಾ ರವರು ಹಿರಿಯೂನಿಂದ 25 ಜನರನ್ನು ದೆಹಲಿಗೆ ಕರೆದುಕೊಂಡು ಹೋಗಿ ನಮ್ಮ ಕಾಡುಗೊಲ್ಲ ಜನಾಂಗವನ್ನು ಎಸ್.ಟಿ.ಸಮುದಾಯಕ್ಕೆ ಸೇರಿಸಬೇಕೆಂದು ಸಂಬಂಧಪಟ್ಟ ಮಂತ್ರಿಗಳಿಗೆ ಮನವಿ ಮಾಡಿಕೊಂಡು ಬಂದಿದ್ದರು. ನಂತರ ಚುನಾವಣೆ ನಡೆದು ಇವರ ಶಾಸಕರಾದ ಮೇಲೆ ಸರ್ಕಾರ ಕಾಡುಗೊಲ್ಲರ ಬಗ್ಗೆ ಮಾಡಿದ ಕುಲಶಾಸ್ತ್ರ ಅಧ್ಯಯನದ ವರದಿ ಸರಿಯಿಲ್ಲ ಮತ್ತೊಮ್ಮೆ ಮಾಡಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಇದರೊಂದಿಗೆ ಕಾಡುಗೊಲ್ಲ ಅಭಿವೃದ್ದಿ ನಿಗಮವನ್ನು ಸಹಾ ಗೊಲ್ಲ-ಕಾಡುಗೊಲ್ಲ ಅಭಿವೃದ್ದಿ ನಿಗಮ ಎಂದು ಪುನರ್ ರಚನೆ ಮಾಡುವಂತೆ ಸರ್ಕಾರಕ್ಕೆ ಪತ್ರ ನೀಡಿದ್ದಾರೆ. ಸರ್ಕಾರ ಇವರ ಪತ್ರಕ್ಕೆ ಮಣಿದು ಹೆಸರನ್ನು ಬದಲಾಯಿಸಿದರೆ ಹೋರಾಟವನ್ನು ಮಾಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದರು.

ಪಾತಲಿಂಗಪ್ಪ ಮಾತನಾಡಿ, ಹಿಂದುಳಿದ ಆಯೋಗದ ಅಧ್ಯಕ್ಷರಾಗಿದ್ದ ಡಾ.ಸಿ.ಎಸ್.ದ್ವಾರಕನಾಥ್ ರವರು ಸಹಾ ನಮ್ಮ ಕಾಡುಗೊಲ್ಲರ ಬಗ್ಗೆ ಆಪಾರವಾದ ಕಾಳಜಿಯನ್ನು ಹೊಂದಿದ್ದು ಈ ಜನಾಂಗ ಎಸ್.ಸಿ.ಗಿಂತ ಕಡೆಯಾಗಿ ಬದುಕುತ್ತಿದ್ದಾರೆ. ಇವರು ಶತ ಶತಮಾನದಿಂದ ತುಳಿತಕ್ಕೆ ಒಳಗಾಗಿದ್ದಾರೆ. ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಪಂಚವಾರ್ಷಿಕ ಯೋಜನೆಯಡಿ ಪ್ರತಿ ವರ್ಷ ವಿಶೇಷವಾದ ಪ್ಯಾಕೇಜ್ ನೀಡುವಂತೆಯೂ ಸಹ ಸಲಹೆ ಮಾಡಿದ್ದಾರೆ. ಇದರೊಂದಿಗೆ ಕಾಡುಗೊಲ್ಲರಿಗಾಗಿಯೇ ಪ್ರತ್ಯೇಕವಾದ ನಿಗಮವನ್ನು ಸ್ಥಾಪಿಸುವಂತೆಯೂ ಸಹಾ ತಿಳಿಸಿದ್ದಾರೆ ಎಂದರು.

ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶೀ ರಾಜಶೇಖರಯ್ಯ, ವೆಂಕಟೇಶ್ ಗೋಷ್ಟಿಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

error: Content is protected !!