Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೋನೂರು ಶಾಲೆ ಮುಚ್ಚಲು ಬಿಡುವುದಿಲ್ಲ ; ವಿದ್ಯಾರ್ಥಿಗಳ ಪೋಷಕರ ಪ್ರತಿಭಟನೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 20 :
KPS- ಮ್ಯಾಗ್ನೆಟ್ ಹೆಸರಿನಲ್ಲಿ ಮುಚ್ಚಲು ಹೊರಟಿರುವ ಗೋನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಗುರುವಾರ ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ‘ನಮ್ಮೂರ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ’ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಸಂಚಾಲಕ ಕೆ ಈರಣ್ಣ ಮಾತನಾಡಿ, ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ರಾಜ್ಯ ಸರ್ಕಾರ ಮುಚ್ಚಲು ಮುಂದಾಗಿದೆ. ಈ ಯೋಜನೆ ಭಾಗವಾಗಿ ಪಿಳ್ಳೇಕೇರಿನಹಳ್ಳಿಯ ಶಾಲೆಯನ್ನು ಕೆಪಿಎಸ್ -ಮ್ಯಾಗ್ನೆಟ್ ಶಾಲೆಯನ್ನಗಿಸಿ ಗೋನೂರು ಗ್ರಾಮದ ಶಾಲೆಯನ್ನು ಅಲ್ಲಿಗೆ ಸೇರಿಸಲಾಗುತ್ತಿದೆ. ಗೋನೂರು ಗ್ರಾಮದಲ್ಲಿ 120ಕ್ಕೂ ಹೆಚ್ಚು ದಾಖಲಾತಿ ಹೊಂದಿರುವ ಈ ಶಾಲೆಯನ್ನು ಮುಚ್ಚುತ್ತಿರವುದು ಸರ್ಕಾರವು ಬಡವರು, ಗಾರೆ ಕೆಲಸ ಮಾಡುವ ಮಕ್ಕಳಿಗೆ ಮಾಡುವ ದ್ರೋಹ. ಹಾಗೆ ಈ ಶಾಲೆಯ ಮಕ್ಕಳಿಗೆ ಶಿಕ್ಷಕರು ಸಂಖ್ಯೆ ಕಡಿಮೆ ಇದೆ, ಈ ಊರಿಗೆ ಪ್ರೌಢಶಾಲೆ ಅಗತ್ಯ ಇದ್ದು, ಈ ಕೆಲಸವನ್ನು ಕೂಡಲೇ ಮಾಡಲಿ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

ಕೆಪಿಎಸ್ ಮ್ಯಾಗ್ನೆಟ್ ಹೆಸರಲ್ಲಿ ನಮ್ಮ ಗ್ರಾಮ ಮಾತ್ರವಲ್ಲದೆ ಸುತ್ತಲಿನ ಹಲವು ಗ್ರಾಮಗಳ ಶಾಲೆಗಳನ್ನು ವಿಲೀನ ಮಾಡಲು ನಿರ್ಧರಿಸಲಾಗಿದೆ. ಹಾಗಾಗಿ ನಾವು ಒಂದಾಗಿ ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆ ಮುಚ್ಚಲು ಅವಕಾಶ ನೀಡುವುದಿಲ್ಲ’ ಎಂದು ತಿಳಿಸಿದರು.

 

ಎಐಯುಟಿಯುಸಿ ಕಾರ್ಮಿಕ ಸಂಘಟನೆಯ ಜಿಲ್ಲಾ ಮುಖಂಡರು ರವಿಕುಮಾರ್ ಅವರು ಬೆಂಬಲಿಸಿ ರಾಜ್ಯದಲ್ಲಿ ಒಂದೇ ಒಂದು ಸರ್ಕಾರಿ ಶಾಲೆಯನ್ನು ಮುಚ್ಚಲು ನಾವು ಬಿಡಬಾರದು. ‘ಸರ್ಕಾರಿ ಶಾಲೆಗಳು ನಮ್ಮ ಹಕ್ಕು, ಎಂದು ಈ ವಿಚಾರದ ಬಗ್ಗೆ ಬಹಳ ಅರ್ಥಮಾಡಿಕೊಂಡು ಶಾಲೆ ಉಳಿಸಲು ಒಗ್ಗಟ್ಟಾಗಿ ಮುಂದೆ ಬರಬೇಕೆಂದು ತಿಳಿಸಿದರು.

 

ಪ್ರತಿಭಟನೆಯಲ್ಲಿ ಸರ್ಕಾರಿ ಶಾಲೆ ಉಳಿಸುವ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಅಧ್ಯಕ್ಷರು ತಿಪ್ಪೇಸ್ವಾಮಿ, ಉಪಾಧ್ಯಕ್ಷರು ಸಿದ್ದೇಶ್, ಶಿವಪ್ಪ ಕಾರ್ಯದರ್ಶಿ ಬಂಗಾರಪ್ಪ, ಜಂಟಿ ಕಾರ್ಯದರ್ಶಿ ಪಟೇಲ್ ತಿಪ್ಪೇಸ್ವಾಮಿ, ಆರ್.ಮಂಜುನಾಥ ಮತ್ತು ಇನ್ನಿತರೆ ಊರಿನ ವಿದ್ಯಾರ್ಥಿಗಳು, ಗ್ರಾಮಸ್ಥರು, ಯುವಕರು ಹಾಗೂ ಪೋಷಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...