ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವಿಜಯಪುರ: ಮೈಲಾರ ಕಾರ್ಣಿಕಕ್ಕೆ ಸಾಕಷ್ಟು ಜನ ಕಾಯುತ್ತಿರುತ್ತಾರೆ. ಈ ದೈವವಾಣಿಯಿಂದ ರಾಜ್ಯದ ಮುಂದಿನ ಭವಿಷ್ಯ ಏನಾಗಲಿದೆ ಎಂದು ಅಂದಾಜಿಸುತ್ತಾರೆ. ನಿನ್ನೆಯಿಂದಾನೇ ಕಾಯುತ್ತಿದ್ದ ಭಕ್ತರಿಗೆ ಇಂದು ಮೈಲಾರ ಕಾರ್ಣಿಕ ಭವಿಷ್ಯ ಕೇಳಿಸಿದೆ. ವಿಜಯನಗರ ಜಿಲ್ಲೆ ಹರಪ್ಪನಹಳ್ಳಿಯ ದೊಡ್ಡ ಮೈಲಾರ ಕಾರ್ಣಿಕೋತ್ಸವದಲ್ಲಿ ಗೊರವಯ್ಯ ಕೋಟೆಪ್ಪ ಭವಿಷ್ಯ ನುಡಿದಿದ್ದಾರೆ. 9 ದಿನ ಉಪವಾಸ ವ್ರತ ಆಚರಿಸಿದ್ದ ಗೊರವಯ್ಯ ಕೋಟೆಪ್ಪ ಅವರನ್ನು ಪಾದಗಟ್ಟೆಯ ಮರಡಿಯಿಂದ ಮೆರವಣಿಗೆ ಮೂಲಕ ಕರೆತರಲಾಯಿತು. ಬಳಿಕ ಗೊರವಪ್ಪ ಸಂಜೆ ಬಿಲ್ಲನ್ನೇರಿ ಸದ್ದಲ್ಲೇ ಎನ್ನುತ್ತಿದ್ದಂತೆ ನೆರದವರೆಲ್ಲ ಶಾಂತರಾಗುತ್ತಿದ್ದಂತೆಯೇ ಕೋಟೆಪ್ಪ ಭವಿಷ್ಯ ನುಡಿದಿದ್ದಾರೆ.
ಮುತ್ತಿನ ರಾಶಿಗೆ ಮಂಜು ಮುಸುಕಿತಲೇ ಪರಾಕ್ ಎಂದು ದೈವವಾಣಿ ನುಡಿದಿದೆ. ಇದರ ಅರ್ಥ ಪ್ರಸಕ್ತ ವರ್ಷದಲ್ಲಿ ಮಳೆ ಸಮೃದ್ಧವಾಗಿ ಉತ್ತಮ ಫಸಲು ಬರುತ್ತದೆ. ಆದರೆ ಇಳುವರಿ ಕುಂಠಿತ ಎಂಬ ಸಂದೇಶವನ್ನು ನೀಡಿದ್ದಾರೆ ಎಂದು ಭಕ್ತರು ಕಾರ್ಣಿಕದ ಅರ್ಥವನ್ನು ಮಾತಾಡಿಕೊಂಡಿದ್ದಾರೆ. ಇನ್ನು ಕೆಲವರು ಮುಂಬರುವ ದಿನಗಳಲ್ಲಿ ಗಂಭೀರ ಘಟನೆ ನಡೆಯಲಿದೆ. ರಾಜ್ಯ ರಾಷ್ಟ್ರದಲ್ಲಿ ದೊಡ್ಡ ಘಟನೆ ನಡೆಯಲಿದೆ ಎಂದು ದೈವವಾಣಿಯನ್ನು ನಾನಾ ರೀತಿಯಲ್ಲಿ ಅರ್ಥೈಸಿದ್ದಾರೆ.
ಇನ್ನು ಹಾನಗಲ್ ತಾಲೂಕಿನ ಆಡೂರು ಮೈಲಾರಲಿಂಗೇಶ್ವರ ಜಾತ್ರೆಯ ಪ್ರಯುಕ್ತ ಕಾರ್ಣಿಕ ನುಡಿಯಲಾಗಿದೆ. ನೀರಿ ಕೊಡ ಉರಡತಲೇ, ತುಪ್ಪದ ಕೊಂಡ ಉಕ್ಕತಲೇ ಪರಾಕ್ ಎಂದು 12 ಅಡಿ ಎತ್ತರದ ಬಿಲ್ಲೇರು ಗೊರವಯ್ಯ ಹನುಮನಗೌಡ ಗುರೇಗೌಡರ ದೈವವಾಣಿ ನುಡಿದಿದ್ದಾರೆ. ಪ್ರಸಕ್ತ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ. ಸಮೃದ್ಧವಾಗಿ ಬೆಳೆಗಳು ಬರಲಿವೆ ಎಂದು ಅಲ್ಲಿ ಕೂಡ ಗ್ರಾಮಸ್ಥರು ವಿಶ್ಲೇಷಣೆ ಮಾಡಲಾಗಿದೆ. ಎರಡು ಕಡೆಯ ಕಾರ್ಣಿಕ ಈ ಬಾರಿ ಉತ್ತಮ ಬೆಳೆಯಾಗಲಿದೆ ಎಂದೇ ಇದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್