ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಚಿತ್ರದುರ್ಗ, (ಡಿ.02) : ಸಿರಿಧಾನ್ಯಗಳು ಹಾಗೂ ಸ್ಥಳೀಯವಾಗಿ ಬೆಳೆಯುವ ಹಣ್ಣು, ತರಕಾರಿ, ಪಡಿತರ ಆಹಾರ ಧಾನ್ಯಗಳನ್ನು ಸೇವಿಸುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದೆಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್‍ಪೂಜಾರಿ ಗ್ರಾಮಸ್ಥರಿಗೆ ತಿಳಿಸಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ತುರುವನೂರಿನ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ಏರ್ಪಡಿಸಲಾಗಿದ್ದ ಆಹಾರ ಮೇಳ ಉದ್ಘಾಟಿಸಿ ಮಾತನಾಡಿದರು.
ಸಕ್ಕರೆ ಕಾಯಿಲೆ, ರಕ್ತದೊತ್ತಡ ಸೇರಿದಂತೆ ಅನೇಕ ರೋಗಗಳನ್ನು ಗುಣಪಡಿಸುವ ಶಕ್ತಿ ಸಿರಿಧಾನ್ಯಗಳಿಗಿದೆ. ಬಹಳಷ್ಟು ಮಂದಿಗೆ ಸಿರಿಧಾನ್ಯಗಳ ಮಹತ್ವ ಗೊತ್ತಿಲ್ಲ. ಹಾಗಾಗಿ ಇನ್ನು ಮುಂದಾದರೂ ಸಿರಿಧಾನ್ಯಗಳನ್ನು ಬಳಸುವುದನ್ನು ರೂಢಿಸಿಕೊಂಡು ಸದೃಢವಾಗಿರಿ ಎಂದು ಮಹಿಳಾ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಕರೆ ನೀಡಿದರು.
ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ಗೀತ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆ ತಾಲ್ಲೂಕು ಯೋಜನಾಧಿಕಾರಿ ಶ್ರೀಮತಿ ಯಶೋಧಶೆಟ್ಟಿ, ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ದೇವಿಕ, ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ
ಸುಧ, ಸೇವಾ ಪ್ರತಿನಿಧಿಗಳಾದ ಶ್ರೀಮತಿ ಪಾರ್ವತಿ, ಲಕ್ಷ್ಮಣ್ ಆಹಾರ ಮೇಳದಲ್ಲಿ ಭಾಗವಹಿಸಿದ್ದರು.