Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ ; ಅಶ್ವಿನಿ ಅವರಿಂದ ವಿಶೇಷ ಕಾರ್ಯಕ್ಕೆ ಚಾಲನೆ

---Advertisement---

ಬೆಂಗಳೂರು; ಇಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ 50ನೇ ಹುಟ್ಟುಹಬ್ಬ. ಕುಟುಂಬಸ್ಥರು, ಆಪ್ತರು, ಅಭಿಮಾನಿಗಳೆಲ್ಲಾ ಸಮಾಧಿ ಬಳಿ ಹೋಗಿ ಪೂಜೆ ಸಲ್ಲಿಸಿದರು. ಇಂದು ಎಲ್ಲರಿಗೂ ಶುಭದಿನ. ಈ ಶುಭ ಸಂದರ್ಭದಲ್ಲಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ವಿಶೇಷವಾದದ್ದೇನೋ ಮಾಡುವುದಕ್ಕೆ ಹೊರಟಿದ್ದಾರೆ. ಅದರಲ್ಲೂ ಈ ಐಡಿಯಾ ದೇಶದಲ್ಲಿಯೇ ಇದೆ ಮೊದಲು. ಹಾಗಾದ್ರೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಮಾಡುವುದಕ್ಕೆ ಹೊರಟಿರೋದು ಏನು..? ಎಂಬ ಮಾಹಿತಿ ಇಲ್ಲಿದೆ.

ತಾವೇನು ಮಾಡುವುದಕ್ಕೆ ಹೊರಟಿದ್ದೇವೆ ಎಂಬುದನ್ನು ತಿಳಿಸಿರುವ ಅಶ್ವಿನಿ ಪುನೀತ್ ರಾಜ್‍ಕುಮಾರ್, ನೀವೆಲ್ಲರೂ ನಮ್ಮ ಮೇಲೆ ಇಟ್ಟಿರುವ ನಂಬಿಕೆ, ಪ್ರೀತಿ, ಗೌರವವೇ ಅಪ್ಪು ನಮ್ಮ ಜೊತೆಗೆ ಇನ್ನೂ ಇದ್ದಾರೆ ಎಂಬುದಕ್ಕೆ ಸಾಕ್ಷಿ. ನಿಮ್ಮೆಲ್ಲರ ನಗುವಿನಲ್ಲಿಯೇ ನಾನು ಅಪ್ಪು ಅವರನ್ನು ಕಾಣುತ್ತಿದ್ದೇನೆ. ಪ್ರತಿದಿನವೂ ಅಪ್ಪು ಅವರನ್ನು ಸೆಲೆಬ್ರೇಟ್ ಮಾಡುವ ಆಸೆ. ಪ್ರತಿಕ್ಷಣ ಅಪ್ಪು ಅವರನ್ನು ನೋಡುವ ಆಸೆ. ಮರೆಯಾದರೂ ಮರೆಯಲು ಸಾಧ್ಯವಿಲ್ಲ. ನಿಮ್ಮ ನಗುವಿನ ಒಡೆಯನನ್ನು ಪ್ರತಿದಿನ ನೋಡಲು ನಿಮಗಾಗಿ ಕಾದಿದೆ ಒಂದು ಗುಡ್ ನ್ಯೂಸ್. ಅಪ್ಪು ಹೆಸರಲ್ಲಿ ಒಂದು ದಿಟ್ಟ ಹೆಜ್ಜೆ. ಅದುವೆ PRKstarfandom App. ಅತಿ ಶೀಘ್ರದಲ್ಲಿ ನಿಮ್ಮ ಮುಂದೆ ಬರಲಿದೆ ಎಂದಿದ್ದಾರೆ.

ಅಷ್ಟಕ್ಕೂ ಈ PRKstarfandom App ಎಂದರೆ ಏನು, ಅದು ಹೇಗೆ ವರ್ಕ್ ಆಗುತ್ತೆ ಗೊತ್ತಾ..? ಈ ಆಪ್ ನಲ್ಲಿ ಅಪ್ಪು ಅವರಿಗೆ ಸಂಬಂಧಿಸಿದ ಎಲ್ಲಾ ವಿವರಗಳು ಲಭ್ಯವಿರಲಿವೆ. ಅಪ್ಪು ಅವರ ಸಿನಿಮಾ, ಸಾಂಗ್ಸ್, ಡ್ಯಾನ್ಸ್, ಭಾಷಣ, ಅವರ ಬಗೆಗಿನ ಸ್ಪೆಷಲ್ ಮಾಹಿತಿ ಇದರಲ್ಲಿ ಸಿಗಲಿದೆ. ಅಪ್ಪು ಬಗ್ಗೆ ಈ ಆಪ್ ಮೂಲಕ ಅವರ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಬಹುದಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment