Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿಕ್ಷಕ ಆಕಾಂಕ್ಷಿಗಳಿಗೆ ಸಿಹಿಸುದ್ದಿ: 15,000 ಶಿಕ್ಷಕರ ಹುದ್ದೆಗಳ ನೇಮಕಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ  

---Advertisement---

ಬೆಂಗಳೂರು : ರಾಜ್ಯದ ಶಾಲಾ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 15,000 ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಿ ಸರ್ಕಾರ ಆದೇಶಿಸಿದೆ.

 2026-27ನೇ ಸಾಲಿನ ಈ ನೇಮಕಾತಿ ಪ್ರಕ್ರಿಯೆಯಲ್ಲಿ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಈ ಹಿಂದೆ ನೀಡಲಾಗಿದ್ದ ದಿನಾಂಕವನ್ನು ಪರಿಷ್ಕರಿಸಿ, ಹೆಚ್ಚಿನ ಕಾಲಾವಕಾಶ ಕಲ್ಪಿಸಲಾಗಿದೆ.

ಹಿಂದಿನ ವೇಳಾಪಟ್ಟಿಯ ಪ್ರಕಾರ ಆನ್‌ಲೈನ್‌ ಅರ್ಜಿ ಸಲ್ಲಿಸಲು 2026ರ ಅಕ್ಟೋಬರ್ 26 ಕೊನೆಯ ದಿನಾಂಕವಾಗಿತ್ತು. ಶಿಕ್ಷಕ ಹುದ್ದೆಯ ಆಕಾಂಕ್ಷಿಗಳ ಹಿತದೃಷ್ಟಿಯಿಂದ ಈ ಅವಧಿಯನ್ನು ವಿಸ್ತರಿಸಲಾಗಿದ್ದು, ಇದೀಗ 2026ರ ಅಕ್ಟೋಬರ್ 26 ರಿಂದ 2026ರ ನವೆಂಬರ್ 16ರವರೆಗೆ ಅರ್ಜಿ ಸಲ್ಲಿಸಲು ಅನುಮತಿ ನೀಡಲಾಗಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಬಿ.ಎನ್. ಆನಂದ್ ಅವರು ಅಧಿಕೃತ ಪತ್ರದ ಮೂಲಕ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

Join WhatsApp

Join Now

Join Telegram

Join Now