ಬೆಂಗಳೂರು.ಜೂನ್.21: ರಾಜ್ಯ ಸರ್ಕಾರವು ಕಟ್ಟಡ ಮಾಲೀಕರಿಗೆ ಹಾಗೂ ಗ್ರಾಮೀಣ ಭಾಗದ ಜನರಿಗೆ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. 2026ರ ಮೇ 31ರ ಒಳಗೆ ಪೂರ್ಣಗೊಂಡಿರುವ ಎಲ್ಲಾ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ವಿಶೇಷ ವಿನಾಯಿತಿಯನ್ನು ಘೋಷಿಸಲಾಗಿದೆ.
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ ಈ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಸಭೆಯ ತೀರ್ಮಾನಗಳನ್ನು ಮಾಧ್ಯಮಗಳಿಗೆ ವಿವರಿಸಲಾಯಿತು.ಈ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರಿ ಆದೇಶ ಹೊರಬಿದ್ದ ದಿನದಿಂದ ಕಟ್ಟಡ ಮಾಲೀಕರಿಗೆ ಅರ್ಜಿ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗುವುದು. ಈ ವಿನಾಯಿತಿ ಪಡೆಯಲು ಕಟ್ಟಡ ಮಾಲೀಕರು ಕೆಲವು ಕಡ್ಡಾಯ ನಿಯಮಗಳನ್ನು ಪಾಲಿಸಬೇಕಾಗುತ್ತದೆ.
2026, ಮೇ 31ರ ಒಳಗೆ ಪೂರ್ಣಗೊಂಡಿರುವ ಎಲ್ಲಾ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ವಿನಾಯಿತಿ ನೀಡಲಾಗಿದ್ದು, ಈ ವಿಚಾರವಾಗಿ ಸರ್ಕಾರಿ ಆದೇಶ ಬಂದ ದಿನದಿಂದ 15 ದಿನಗಳ ಕಾಲಾವಕಾಶ ನೀಡಲಾಗುವುದು. ಕಟ್ಟಡ ಮಾಲೀಕರು ಕಟ್ಟಡದ ಜೊತೆಗಿನ ಫೋಟೋ ಹಾಗೂ ಜಿಪಿಎಸ್ ದಾಖಲೆ ಕಡ್ಡಾಯವಾಗಿ ಸಲ್ಲಿಕೆ ಮಾಡಬೇಕು.
ಗ್ರಾಮೀಣ ಭಾಗದ ರೇಷ್ಮೆ ಸಾಕಾಣಿಕೆ ಮನೆ,… pic.twitter.com/BqMq6URCwA
— DIPR Karnataka (@KarnatakaVarthe) June 20, 2026
ಕಟ್ಟಡದ ಜೊತೆಗಿನ ಮಾಲೀಕರ ಫೋಟೋವನ್ನು ಸಲ್ಲಿಸಬೇಕು.
ಕಟ್ಟಡದ ಜಿಪಿಎಸ್ (GPS) ದಾಖಲೆಯನ್ನು ಕಡ್ಡಾಯವಾಗಿ ಸಲ್ಲಿಕೆ ಮಾಡಬೇಕು.
ರೇಷ್ಮೆ ಸಾಕಾಣಿಕೆ ಮನೆ, ಕೊಟ್ಟಿಗೆಗಳಿಗೂ ವಿನಾಯಿತಿ
ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ, ಹಳೆಯದಾಗಿ ನಿರ್ಮಿಸಲಾಗಿರುವ ರೇಷ್ಮೆ ಸಾಕಾಣಿಕೆ ಮನೆಗಳು ಹಾಗೂ ಕೊಟ್ಟಿಗೆಗಳಿಗೂ ವಿದ್ಯುತ್ ವಿನಾಯಿತಿ ನೀಡಲು ಸರ್ಕಾರ ನಿರ್ಧರಿಸಿದೆ. ಆದರೆ, ಹೊಸದಾಗಿ ನಿರ್ಮಾಣ ಮಾಡುವ ಕಟ್ಟಡಗಳಿಗೆ ಈ ಅವಕಾಶ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

















