Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

KPSC ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ: ವಯೋಮಿತಿಯಲ್ಲಿ 5 ವರ್ಷ ಸಡಿಲಿಕೆ!

---Advertisement---

ಬೆಂಗಳೂರು.ಆಗಸ್ಟ್.14 :  ಕರ್ನಾಟಕ ಲೋಕಸೇವಾ ಆಯೋಗವು (KPSC) 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ವೃಂದದ ಒಟ್ಟು 319 (ಉಳಿಕೆ ಮೂಲ ವೃಂದ 297 + ಹೈದರಾಬಾದ್-ಕರ್ನಾಟಕ ವೃಂದ 22) ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ಮಹತ್ವದ ಸಿಹಿ ಸುದ್ದಿಯೊಂದನ್ನು ನೀಡಿದೆ.

ಸರ್ಕಾರದ ಆದೇಶದನ್ವಯ ಈ ಹುದ್ದೆಗಳ ಅರ್ಜಿಗೆ ನಿಗದಿಪಡಿಸಲಾಗಿದ್ದ ಗರಿಷ್ಠ ವಯೋಮಿತಿಯಲ್ಲಿ 05 ವರ್ಷಗಳ ಹೆಚ್ಚುವರಿ ಸಡಿಲಿಕೆ ನೀಡಲಾಗಿದ್ದು, ನೂತನ ವಯೋಮಿತಿ ವಿವರಗಳನ್ನು ಆಯೋಗವು ಪ್ರಕಟಿಸಿದೆ.

ಪರಿಷ್ಕೃತ ವಯೋಮಿತಿ ವಿವರಗಳು:

ಕನಿಷ್ಠ ವಯೋಮಿತಿ: 21 ವರ್ಷಗಳು

ಸಾಮಾನ್ಯ ಅರ್ಹತೆ (GM): ಗರಿಷ್ಠ 40 ವರ್ಷಗಳು (ಹಿಂದೆ 35 ವರ್ಷವಿತ್ತು)

ಪ್ರವರ್ಗ 2A, 2B, 3A, 3B: ಗರಿಷ್ಠ 43 ವರ್ಷಗಳು (ಹಿಂದೆ 38 ವರ್ಷವಿತ್ತು)

ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1: ಗರಿಷ್ಠ 45 ವರ್ಷಗಳು (ಹಿಂದೆ 40 ವರ್ಷವಿತ್ತು)

ಜುಲೈ 31, 2026 ರಂದು ಹೊರಡಿಸಲಾಗಿದ್ದ ಅಧಿಸೂಚನೆಗೆ ಅನುಗುಣವಾಗಿ, ಸರ್ಕಾರದ ಪ್ರಸ್ತಾವನೆಯನ್ನು ಅಳವಡಿಸಿಕೊಂಡು ಈ ವಯೋಮಿತಿ ಸಡಿಲಿಕೆಯನ್ನು ಜಾರಿಗೆ ತರಲಾಗಿದೆ ಎಂದು KPSC ಕಾರ್ಯದರ್ಶಿ ಜ್ಯೋತಿ ಕೆ. ಅವರು ತಿಳಿಸಿದ್ದಾರೆ. ಈ ನಿರ್ಧಾರದಿಂದಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ದೊಡ್ಡ ಮಟ್ಟದ ಅನುಕೂಲವಾಗಲಿದೆ.

Join WhatsApp

Join Now

Join Telegram

Join Now