Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

CET ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಈ ವಿಷಯಗಳಿಗೆ ಕೃಪಾಂಕ ಘೋಷಿಸಿದ KEA

---Advertisement---

ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (CET-2026) ಬರೆದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಸಿಹಿಸುದ್ದಿ ನೀಡಿದೆ. ಪರೀಕ್ಷೆಯಲ್ಲಿ ಕೆಲವು ಪ್ರಶ್ನೆಗಳ ಕುರಿತು ಬಂದ ಆಕ್ಷೇಪಣೆಗಳ ಪರಿಶೀಲನೆಯ ಬಳಿಕ ಪ್ರಾಧಿಕಾರ ಕೃಪಾಂಕ (Grace Marks) ನೀಡಲು ತೀರ್ಮಾನಿಸಿದೆ.

ಏಪ್ರಿಲ್ 23 ಮತ್ತು 24, 2026ರಂದು ನಡೆದ CET ಪರೀಕ್ಷೆಯ ಭೌತಶಾಸ್ತ್ರ (Physics) ಮತ್ತು ರಸಾಯನಶಾಸ್ತ್ರ (Chemistry) ವಿಷಯಗಳಲ್ಲಿ ತಲಾ ಒಂದು ಪ್ರಶ್ನೆಗೆ ಕೃಪಾಂಕ ನೀಡಲಾಗುತ್ತದೆ ಎಂದು KEA ಪ್ರಕಟಿಸಿದೆ.ಇದಲ್ಲದೆ, ಜೀವಶಾಸ್ತ್ರ (Biology) ವಿಷಯದ ಒಂದು ಪ್ರಶ್ನೆಗೆ ಎರಡು ಪರ್ಯಾಯ ಉತ್ತರಗಳನ್ನು ಸರಿಯಾದ ಉತ್ತರಗಳೆಂದು ಪರಿಗಣಿಸಲಾಗಿದೆ.ಗಣಿತಶಾಸ್ತ್ರ (Mathematics) ವಿಷಯದಲ್ಲಿ ಪ್ರಕಟಿಸಿದ್ದ ಸರಿ ಉತ್ತರಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.

ಈ ಮೊದಲು ಏಪ್ರಿಲ್ 26ರಂದು KEA ತಾತ್ಕಾಲಿಕ ಉತ್ತರ ಕೀ (Provisional Answer Key) ಬಿಡುಗಡೆ ಮಾಡಿ ಅಭ್ಯರ್ಥಿಗಳಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ನಂತರ ತಜ್ಞರ ಸಮಿತಿ ಆಕ್ಷೇಪಣೆಗಳನ್ನು ಪರಿಶೀಲಿಸಿ ನೀಡಿದ ಶಿಫಾರಸಿನ ಮೇರೆಗೆ ಅಂತಿಮ ಉತ್ತರ ಕೀ ಪರಿಷ್ಕರಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ಕೃಪಾಂಕದ ಲಾಭ ದೊರೆಯಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now