ಮಂಗಳೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇವರ ದರ್ಶನ ಸಮಯವನ್ನು ವಿಸ್ತರಿಸಲಾಗಿದೆ. ಭಕ್ತರಿಗೆ ಅನುಕೂಲವಾಗುವ ಉದ್ದೇಶದಿಂದ ಹೆಚ್ಚುವರಿ ಒಂದು ಗಂಟೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್. ಇಂಜಾಡಿ ತಿಳಿಸಿದ್ದಾರೆ.
ಈ ಹಿಂದೆ ಮಧ್ಯಾಹ್ನ 1.30ರಿಂದ 3.30ರವರೆಗೆ ದೇವರ ದರ್ಶನಕ್ಕೆ ಅವಕಾಶ ಇರಲಿಲ್ಲ. ಇದೀಗ ದೇವಸ್ಥಾನ ಆಡಳಿತ ಮಂಡಳಿ ಕೈಗೊಂಡಿರುವ ಹೊಸ ನಿರ್ಣಯದಂತೆ ಮಧ್ಯಾಹ್ನ 2.00ರಿಂದ 3.00ರವರೆಗೆ ಮಾತ್ರ ದೇವಸ್ಥಾನವನ್ನು ಬಂದ್ ಮಾಡಲಾಗುತ್ತದೆ. ಇದರೊಂದಿಗೆ ಭಕ್ತರಿಗೆ ಹೆಚ್ಚುವರಿ ಒಂದು ಗಂಟೆ ದರ್ಶನ ಸೌಲಭ್ಯ ದೊರೆಯಲಿದೆ.ಹೊಸ ವೇಳಾಪಟ್ಟಿಯ ಪ್ರಕಾರ, ಪ್ರತಿದಿನ ಬೆಳಗ್ಗೆ 6.30ರಿಂದ ಮಧ್ಯಾಹ್ನ 2.00ರವರೆಗೆ ಹಾಗೂ ಮಧ್ಯಾಹ್ನ 3.00ರಿಂದ ರಾತ್ರಿ 8.30ರವರೆಗೆ ಭಕ್ತರು ದೇವರ ದರ್ಶನ ಪಡೆಯಬಹುದು.
ಇನ್ನು ಶ್ರೀ ದೇವರ ಮಧ್ಯಾಹ್ನ ಮತ್ತು ರಾತ್ರಿ ಮಹಾಪೂಜೆ ನಡೆಯುವ ಸಮಯದಲ್ಲಿ ಮಾತ್ರ ಹಿಂದಿನಂತೆ ಅಲ್ಪಾವಧಿಗೆ ದರ್ಶನ ಸ್ಥಗಿತಗೊಳಿಸಲಾಗುತ್ತದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಯಾತ್ರಾ ಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯದ ವಿವಿಧ ಭಾಗಗಳಷ್ಟೇ ಅಲ್ಲದೆ ಹೊರರಾಜ್ಯಗಳಿಂದಲೂ ಸಾವಿರಾರು ಭಕ್ತರು ಆಗಮಿಸುತ್ತಾರೆ. ವಿಶೇಷವಾಗಿ ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ವಿವಿಧ ಸೇವೆಗಳಿಗಾಗಿ ಪ್ರತಿದಿನ ಭಕ್ತರ ದಟ್ಟಣೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ದರ್ಶನ ಸಮಯ ವಿಸ್ತರಣೆ ಮಹತ್ವದ ನಿರ್ಧಾರವಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.







