ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM-KISAN) ದೇಶದ ರೈತರಿಗೆ ಬಹಳ ಉಪಯೋಗದ ಯೋಜನೆಯಾಗಿದೆ. ಯೋಜನೆಯ ಮೂಲಕ ಕೇಂದ್ರ ಸರ್ಕಾರ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಆರ್ಥಿಕ ನೆರವು ನೀಡುತ್ತಾ ಬಂದಿದೆ.
ಹಲವು ರೈತರಿಗೆ ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಜಮಾ ಆಗಿಲ್ಲ ಎಂಬ ಆರೋಪಗಳು ಕೇಳಿಬಂದಿದೆ.ಪ್ರತಿ ವರ್ಷ ಅರ್ಹ ರೈತರಿಗೆ ಮೂರು ಸಮಾನ ಕಂತುಗಳಲ್ಲಿ ಒಟ್ಟು ₹6,000 ರೂ. ಹಣ ವಿತರಿಸಲಾಗುತ್ತದೆ. ಆದ್ದರಿಂದ ಮಾರ್ಚ್ ತಿಂಗಳ ಮೊದಲ ವಾರದಲ್ಲಿ ರೈತರ ಖಾತೆಗಳಿಗೆ ₹2,000 ಜಮಾ ಆಗುವ ನಿರೀಕ್ಷೆಯಿದೆ.
ರೈತರು ತಮ್ಮ ಪಿಎಂ ಕಿಸಾನ್ ಹಣ ಬಂದಿದೆಯಾ? ಇಲ್ವಾ? ಎಂದು ಮನೆಯಲ್ಲಿ ಕುಳಿತುಕೊಂಡು ಪರಿಶೀಲಿಸಬಹುದು. ಇದಕ್ಕಾಗಿ, ಯೋಜನೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ‘ಫಲಾನುಭವಿ ಸ್ಥಿತಿ’ (Beneficiary Status) ಆಯ್ಕೆಯಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಬೇಕು. ಕಂತು ಪಾವತಿಯಾಗಿದೆಯೇ ಅಥವಾ ಬಂದಿಲ್ಲದಿದ್ದರೆ ಅದಕ್ಕೆ ಕಾರಣ ಏನು ಎಂಬುದು ಲಭ್ಯವಾಗುತ್ತದೆ. ಯಾವುದೇ ಸಮಸ್ಯೆ ಎದುರಾದರೆ, ಹತ್ತಿರದ ಕೃಷಿ ಕಚೇರಿ ಅಥವಾ ಸೇವಾ ಕೇಂದ್ರದ ಸಹಾಯ ಪಡೆಯಬಹುದು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











