ಸುದ್ದಿಒನ್ | 2025ರ ಹೊಸ ವರ್ಷದಂದು ರೈತರಿಗೆ ಸಿಹಿಸುದ್ದಿ ನೀಡಿದ್ದಾರೆ. ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಈ ಸಂದರ್ಭದಲ್ಲಿ ಇಂದು ನಡೆದ ಮೊದಲ ಕೇಂದ್ರ ಸಚಿವ ಸಂಪುಟದಲ್ಲಿ ಮೋದಿ ಸರ್ಕಾರ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದೆ.
ಪ್ರಕೃತಿ ವಿಕೋಪದಿಂದ ಸಂಕಷ್ಟದಲ್ಲಿರುವ ರೈತರಿಗೆ ಆಸರೆಯಾಗಲು ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ವ್ಯಾಪ್ತಿಯನ್ನು ಹೆಚ್ಚಿಸಲಾಗಿದೆ. ಈ ಯೋಜನೆಗಾಗಿ 69515 ಕೋಟಿ ಮೀಸಲಿಡಲಾಗಿದೆ. ಈ ಯೋಜನೆಯಿಂದ 4 ಕೋಟಿ ರೈತರಿಗೆ ಅನುಕೂಲವಾಗಲಿದೆ. ಅಲ್ಲದೆ, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. 23 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳು ಈ ಯೋಜನೆಯಲ್ಲಿ ಪಾಲ್ಗೊಳ್ಳಲಿವೆ.
ವಿಮಾ ಪಾವತಿಯ ವಿಷಯದಲ್ಲಿ ಈಶಾನ್ಯ ರಾಜ್ಯಗಳ ಪ್ರೀಮಿಯಂನ 90 ಪ್ರತಿಶತವನ್ನು ಕೇಂದ್ರವು ಭರಿಸಲಿದೆ. ಬೇರೆ ರಾಜ್ಯಗಳಲ್ಲಿ ಶೇ.50 ರಷ್ಟು ಹಣ ನೀಡಲಾಗುವುದು. ಇನ್ನೊಂದೆಡೆ ಕೇಂದ್ರ ರಸಗೊಬ್ಬರ ಮೇಲಿನ ಸಬ್ಸಿಡಿ ಹೆಚ್ಚಿಸಿದೆ. ದುರಂತದ ತೀವ್ರತೆ ತಗ್ಗಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಈ ವರ್ಷವನ್ನು ರೈತ ಕಲ್ಯಾಣ ವರ್ಷ ಎಂದು ಘೋಷಿಸಿದೆ. ಫಸಲ್ ಬಿಮಾ ಯೋಜನೆ ರೈತರ ಬದುಕಿನಲ್ಲಿ ಮಹತ್ವದ ಬದಲಾವಣೆ ತಂದಿದೆ ಎಂದರು. ಕಳೆದ ಹತ್ತು ವರ್ಷಗಳಲ್ಲಿ ತಮ್ಮ ಸರ್ಕಾರ ರೈತರ ಕಲ್ಯಾಣಕ್ಕಾಗಿ 11.9 ಲಕ್ಷ ಕೋಟಿ ಖರ್ಚು ಮಾಡಿದೆ ಎಂದು ಅವರು ತಿಳಿಸಿದರು. ಇದಲ್ಲದೆ, ಕೇಂದ್ರವು 2025 ರಲ್ಲಿ ಪ್ರಧಾನಿ ಮೋದಿಯವರ ಮೊದಲ ಸಂಪುಟ ಸಭೆಯನ್ನು ರೈತರಿಗೆ ಅರ್ಪಿಸಿದೆ.
ಡಿಎಪಿ ಮೇಲಿನ ಹೆಚ್ಚುವರಿ ಹೊರೆಯನ್ನು ಕೇಂದ್ರ ಭರಿಸಲಿದೆ. ಇನ್ನು ಮುಂದೆ 50 ಕೆಜಿ ತೂಕದ ಡಿಎಪಿ ಚೀಲ 1350 ರೂ.ಗೆ ದೊರೆಯಲಿದೆ. ಕೇಂದ್ರದ ಈ ಇತ್ತೀಚಿನ ನಿರ್ಧಾರದಿಂದ ದೇಶಾದ್ಯಂತ 4 ಕೋಟಿ ರೈತರಿಗೆ ಅನುಕೂಲವಾಗಲಿದೆ. ಅದೇ ರೀತಿ ಇನ್ನೋವೇಶನ್ ಮತ್ತು ಟೆಕ್ನಾಲಜಿ ನಿಧಿಗಾಗಿ ಕೇಂದ್ರವು ರೂ.800 ಕೋಟಿ ನಿಧಿಯನ್ನು ಸ್ಥಾಪಿಸಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನೀಡುವ ಮೊತ್ತವನ್ನು ರೂ.6 ಸಾವಿರದಿಂದ ರೂ.10 ಸಾವಿರಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
ಸಂಪುಟದ ನಿರ್ಧಾರಗಳ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ ಅವರು ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ. ರೈತರ ಶ್ರೇಯೋಭಿವೃದ್ಧಿಗೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ. ದೇಶಕ್ಕೆ ಅನ್ನ ನೀಡಲು ಶ್ರಮಿಸುವ ರೈತರು ನಮ್ಮ ಹೆಮ್ಮೆ ಎಂದಿದ್ದಾರೆ. 2025ರ ಮೊದಲ ಸಚಿವ ಸಂಪುಟ ಸಭೆಯನ್ನು ರೈತರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವುದು. ಸಂತಸ ತಂದಿದೆ ಎಂದು ಮೋದಿ ಹೇಳಿದರು.