Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೈತರಿಗೆ ಶುಭಸುದ್ದಿ : 14 ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲು ಮೋದಿ ಸಂಪುಟ ಗ್ರೀನ್ ಸಿಗ್ನಲ್

---Advertisement---

ಸುದ್ದಿಒನ್,ನವದೆಹಲಿ: ಮುಂಗಾರು ಹಂಗಾಮು ಆರಂಭವಾಗುತ್ತಿರುವ ಬೆನ್ನಲ್ಲೇ ದೇಶದ ಅನ್ನದಾತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು 2026-27ರ ಮಾರುಕಟ್ಟೆ ಹಂಗಾಮಿಗಾಗಿ 14 ಪ್ರಮುಖ ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು (MSP) ಹೆಚ್ಚಿಸಲು ಐತಿಹಾಸಿಕ ಅನುಮೋದನೆ ನೀಡಿದೆ.

ಸಚಿವ ಸಂಪುಟದ ತೀರ್ಮಾನಗಳನ್ನು ಮಾಧ್ಯಮಗಳಿಗೆ ವಿವರಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, “ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ (CACP) ಶಿಫಾರಸುಗಳನ್ನು ಆಧರಿಸಿ ಈ ಬೆಲೆ ಏರಿಕೆ ಮಾಡಲಾಗಿದೆ. ಇದರಿಂದ ರೈತರ ಆದಾಯ ಹೆಚ್ಚಳವಾಗುವುದಲ್ಲದೆ, ಕೃಷಿ ಕ್ಷೇತ್ರದಲ್ಲಿ ಹೊಸ ಚೈತನ್ಯ ಮೂಡಲಿದೆ,” ಎಂದು ತಿಳಿಸಿದರು.

ಈ ಹಂಗಾಮಿನಲ್ಲಿ ಸರ್ಕಾರವು ಒಟ್ಟು 824 ಲಕ್ಷ ಮೆಟ್ರಿಕ್ ಟನ್ ಬೆಳೆಗಳನ್ನು ಖರೀದಿಸುವ ಗುರಿ ಹೊಂದಿದೆ. ಪ್ರಮುಖವಾಗಿ ಎಣ್ಣೆಕಾಳು ಮತ್ತು ವಾಣಿಜ್ಯ ಬೆಳೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ:

ಸೂರ್ಯಕಾಂತಿ ಬೀಜ: ಪ್ರತಿ ಕ್ವಿಂಟಾಲ್ಗೆ ₹622 ರಷ್ಟು ಗರಿಷ್ಠ ಏರಿಕೆ ಮಾಡಲಾಗಿದ್ದು, ರೈತರಿಗೆ ದೊಡ್ಡ ಲಾಭ ಸಿಗಲಿದೆ.
ಹತ್ತಿ ಮತ್ತು ಎಳ್ಳು: ಹತ್ತಿಗೆ ಪ್ರತಿ ಕ್ವಿಂಟಾಲ್ಗೆ ₹557 ಹಾಗೂ ಎಳ್ಳಿಗೆ ₹500 ರಷ್ಟು ಹೆಚ್ಚಳ ಮಾಡಲಾಗಿದೆ.
ಧಾನ್ಯಗಳ ಹೊಸ ದರ: ಎ ದರ್ಜೆಯ ಭತ್ತಕ್ಕೆ ₹2,461, ಹೈಬ್ರಿಡ್ ಜೋಳಕ್ಕೆ ₹4,023, ಬಾಜ್ರಾ (ಸಜ್ಜೆ) ಗೆ ₹2,900 ಮತ್ತು ತೊಗರಿ ಬೇಳೆಗೆ (ತೂರ್ ದಾಲ್) ₹8,450 ಎಂಎಸ್ಪಿ (MSP) ನಿಗದಿಪಡಿಸಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now