ಬಳ್ಳಾರಿ: ಕಡಲೆ ಕಾಳು ಬೆಎಯನ್ನು ಬೆಂಬಲ ಬೆಲೆಗೆ ಖರೀದಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಕರ್ನಾಟಕ ಸರ್ಕಾರದ ಪ್ರಸ್ತಾವನೆಯಂತೆ ರಾಜ್ಯದಲ್ಲಿ 2024-25ರ ಹಿಂಗಾರು ಬೆಳೆ ಯೋಜನೆಯಡಿ ಕಡಲೆಕಾಳು ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾಡುವುದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಭಾರತ ಸರ್ಕಾರದ ಕೃಷಿ ಸಚಿವಾಲಯ 96,498 ಮೆಟ್ರಿಕ್ ಟನ್ ಕಡಲೆ ಕಾಳು ಖರೀದಿ ಮಾಡಲು ಅನುಮತಿ ನೀಡಿದ್ದು, ಬೆಂಬಲ ಬೆಲೆಯನ್ನು ಘೋಷಣೆ ಮಾಡಿದೆ.
ಕೇಂದ್ರ ಸರ್ಕಾರವು ಕಡಲೆ ಕಾಳು ಉತ್ಪನ್ನಕ್ಕೆ ನಿಗದಿಪಡಿಸಿರುವ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ ಗೆ 5,650 ರೂಪಾಯಿ. ಇದೀಗ ರೈತರಿಂದ ಇದೆ ದರದಲ್ಲಿಯೇ ಖರೀದಿಸಲಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ. ಅರ್ಹ ಹಾಗೂ ಆಸಕ್ತ ರೈತರು ನೋಂದಣಿ ಮಾಡಿಕೊಳ್ಳಬಹುದಾಗಿದೆ. ನೋಂದಣಿ ಮಾಡಿಕೊಳ್ಳ ಹಲವು ದಾಖಲೆಗಳ ಅಗತ್ಯವಿದೆ. ಕಡಲೆ ಕಾಳು ಬೆಳೆಯನ್ನು ಮಾರಾಟ ಮಾಡಲು ಬಯಸುವ ರೈತರು, ಆಧಾರ್ ಕಾರ್ಡ್ ಹೊಂದಿರುವುದು ಕಡ್ಡಾಯ. ಪ್ತಸಕ್ತ ವರ್ಷದ ಪಹಣಿ ಪತ್ರ, ಎಫ್ಐಡಿ ಕಡ್ಡಾಯವಾಗಿದೆ.
ನೋಂದಣಿ ಸಮಯದಲ್ಲಿ ರೈತರು ಬ್ಯಾಂಕ್ ಖಾತೆ ಪುಸ್ತಕದ ನಕಲಿ ಪ್ರತಿಯನ್ನು ತೆಗೆದುಕೊಂಡು ಹೋಗಬೇಕು. ರೈತರು ತಮ್ಮ ಹೆಸರನ್ನು ಫ್ರೂಟ್ಸ್ ಫಲಿತಾಂಶದಲ್ಲಿ ನೊಂದಣಿ ಮಾಡಬೇಕು. ರೈತರಲ್ಲಿ ಫ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಫ್ರೂಟ್ಸ್‌ನಲ್ಲಿ ಯಾವುದಾದರೂ ತಾಂತ್ರಿಕ ದೋಷವಿದ್ದಲ್ಲಿ ಕೃಷಿ ಇಲಾಖೆ ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆಯಬಹುದು. ಒಣಗಿದ ಹಾಗೂ ಸ್ವಚ್ಛ ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಕೇಂದ್ರಕ್ಕೆ ಮಾರಾಟ ಮಾಡಲು ತರಬೇಕು. ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಹಾಗೂ ನೋಂದಣಿ ಚೀಟಿ ಪಡೆಯಬೇಕು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











