ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಅಕ್ಟೋಬರ್ 1ರಿಂದ ನಗದುರಹಿತ ಚಿಕಿತ್ಸೆ ನೀಡುವ ಆರೋಗ್ಯ ಸಂಜೀವಿನಿ ಜಾರಿ

1 Min Read

 

ಸುದ್ದಿಒನ್, ಬೆಂಗಳೂರು, ಸೆಪ್ಟೆಂಬರ್. 23 :
ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅಕ್ಟೋಬರ್ 1, 2025 ರಿಂದ ಜಾರಿಗೆ ಬರಲಿದೆ.

ಈ ಯೋಜನೆಗಾಗಿ ನೌಕರರ ವೇತನದಿಂದ ಗ್ರೂಪ್‌ಗೆ ಅನುಗುಣವಾಗಿ ಮಾಸಿಕ ವಂತಿಕೆ ಕಡಿತ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಅನುಷ್ಠಾನ : ನೌಕರರ ವರ್ಗವಾರು ವಂತಿಗ ಕಡಿತ ವಿವರ

ಗ್ರೂಪ್ ಎ: 1,000
ಗ್ರೂಪ್ ಬಿ: 500
ಗ್ರೂಪ್ ಸಿ: 350
ಗ್ರೂಪ್ ಡಿ: 250

ಈ ಯೋಜನೆಯು ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ನಗದು ರಹಿತವಾಗಿ ಪಡೆಯಲು ಸಹಾಯಕವಾಗಲಿದೆ.
ಅಕ್ಟೋಬರ್‌ನಿಂದಲೇ ಇದರ ಪ್ರಯೋಜನಗಳು ಲಭ್ಯವಾಗಲಿವೆ ಎಂದು ಸರ್ಕಾರದ ವಿಶೇಷ ಕಾರ್ಯದರ್ಶಿ ಚಂದ್ರಶೇಖರ್ ಅವರು ತಿಳಿಸಿದ್ದಾರೆ.

 

Share This Article
Enable Notifications OK No thanks