ಸುದ್ದಿಒನ್, ಬೆಂಗಳೂರು, ಸೆಪ್ಟೆಂಬರ್. 23 :
ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅಕ್ಟೋಬರ್ 1, 2025 ರಿಂದ ಜಾರಿಗೆ ಬರಲಿದೆ.
ಈ ಯೋಜನೆಗಾಗಿ ನೌಕರರ ವೇತನದಿಂದ ಗ್ರೂಪ್‌ಗೆ ಅನುಗುಣವಾಗಿ ಮಾಸಿಕ ವಂತಿಕೆ ಕಡಿತ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಅನುಷ್ಠಾನ : ನೌಕರರ ವರ್ಗವಾರು ವಂತಿಗ ಕಡಿತ ವಿವರ
ಗ್ರೂಪ್ ಎ: 1,000
ಗ್ರೂಪ್ ಬಿ: 500
ಗ್ರೂಪ್ ಸಿ: 350
ಗ್ರೂಪ್ ಡಿ: 250
ಈ ಯೋಜನೆಯು ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ನಗದು ರಹಿತವಾಗಿ ಪಡೆಯಲು ಸಹಾಯಕವಾಗಲಿದೆ.
ಅಕ್ಟೋಬರ್‌ನಿಂದಲೇ ಇದರ ಪ್ರಯೋಜನಗಳು ಲಭ್ಯವಾಗಲಿವೆ ಎಂದು ಸರ್ಕಾರದ ವಿಶೇಷ ಕಾರ್ಯದರ್ಶಿ ಚಂದ್ರಶೇಖರ್ ಅವರು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















