Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಶೀಘ್ರದಲ್ಲೇ ಎರಡು ತಿಂಗಳ ಹಣ ಜಮೆ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

---Advertisement---

ಸುದ್ದಿಒನ್,ಬೆಳಗಾವಿ,ಮೇ.11: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಯ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಿಹಿ ಸುದ್ದಿ ನೀಡಿದ್ದಾರೆ. ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಬಾಕಿ ಇರುವ ಹಣ ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಾಕನೂರು ಗ್ರಾಮದಲ್ಲಿ ನಡೆದ ಶ್ರೀ ಮಹಾಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಮಾರ್ಚ್ ತಿಂಗಳ ಹಣ ಮುಂದಿನ 4 ರಿಂದ 5 ದಿನಗಳಲ್ಲಿ ಖಾತೆಗೆ ಬರಲಿದೆ. ಏಪ್ರಿಲ್ ತಿಂಗಳ ಹಣ ಮುಂದಿನ 8 ರಿಂದ 10 ದಿನಗಳಲ್ಲಿ ಜಮೆಯಾಗಲಿದೆ ಎಂದು ಹೇಳಿದ್ದಾರೆ.

ನನಗೆ ಜನಪರ ಕೆಲಸ ಮಾಡುವುದೆಂದರೆ ಅತೀವ ಆಸಕ್ತಿ. 2013ರ ಚುನಾವಣೆಯಲ್ಲಿ ಸೋತಾಗಲೂ ನಾನು ಜನರ ಕೆಲಸ ಮಾಡುವುದನ್ನು ನಿಲ್ಲಿಸಿರಲಿಲ್ಲ. ನಾಟಕ ಮಾಡುವುದು ನನಗೊತ್ತಿಲ್ಲ, ಕೆಲಸ ಮಾಡುವುದಷ್ಟೇ ನನ್ನ ಗುರಿ ಹಿಂದೆ ಆಯ್ಕೆಯಾದವರು ಕೇವಲ ಹಿಂದುತ್ವದ ಹೆಸರಿನಲ್ಲಿ ಓಡಾಡಿದ್ದನ್ನು ಬಿಟ್ಟು ಬೇರೇನೂ ಮಾಡಿಲ್ಲ. ಆದರೆ ನಾನು ಎಲ್ಲ ಜಾತಿ, ಧರ್ಮ ಹಾಗೂ ಭಾಷಿಕರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇನೆ ಎಂದು ವಿರೋಧಿಗಳಿಗೆ ಟಾಂಗ್ ನೀಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now