ಪ್ರೌಢಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್

suddionenews
1 Min Read

ಬೆಂಗಳೂರು; ಪ್ರೌಢಶಾಲಾ ಶಿಕ್ಷಕರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಸಹ ಶಿಕ್ಷಕರ ಹುದ್ದೆಯಿಂದ ಪದವಿ ಪೂರ್ವ ಕಾಲೇಜಿಗೆ ಉಪನ್ಯಾಸಕರಾಗಿ ಬಡ್ತಿ ನೀಡುವ ಕುರಿತು ವಿಧಾನ ಪರಿಷತ್ ಕಲಾಪದಲ್ಲಿ ಚರ್ಚೆ ನಡೆದಿದೆ. ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಉತ್ತರ ನೀಡಿದ್ದಾರೆ. ಉಒನ್ಯಾಸಕರಾಗಿ ಬಡ್ತಿ ನೀಡುವ ಪ್ರಕ್ರಿಯೆ ಯಾವಾಗ ಆರಂಭವಾಗಲಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ಈ ಸಂಬಂಧ ಸಚಿವ ಮಧು ಬಂಗಾರಪ್ಪ ಉತ್ತರ ನೀಡಿದ್ದಾರೆ. ಪರಿಷತ್ ಸದಸ್ಯರು 13 ವರ್ಷಗಳಿಂದ ಪ್ರೌಢಶಾಲಾ ಶಿಕ್ಷಕರಿಗೆ ಪದವಿ ಪೂರ್ವ ಕಾಲೇಜಿಗೆ ಉಪನ್ಯಾಸಕರಾಗಿ ಬಡ್ತಿ‌ ನೀಡದಿರಲು ಕಾರಣವೇನು..? ಈ ವಿಳಂಬದಿಂದಾಗಿ ಸಾಕಷ್ಟು ಶಿಕ್ಷಕರು ಸೇವೆ ಮಾಡಿ ಬಡ್ತಿ ಇಲ್ಲದೆ ನಿವೃತ್ತಿ ಹೊಂದುತ್ತಿದ್ದು, ಅನ್ಯಾಯಕ್ಕೊಳಗಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯ ಪ್ರಶ್ನೆ ಮಾಡಿದ್ದಾರೆ. ಸರ್ಕಾರವೂ 2025ರ ಫೆಬ್ರವರಿ ತಿಂಗಳೊಳಗಾಗಿಯೇ ಬಡ್ತಿ ಕಾರ್ಯವನ್ನು ಪೂರ್ಣಗೊಳಿಸುವುದು ಎಂದು ಸದನದಲ್ಲಿ ಭರವಸೆ ನೀಡಿದರು. ಆದರೆ ಇಲ್ಲಿಯವರೆಗೂ ಜೇಷ್ಠತಾ ಪಟ್ಟಿಯನ್ನೇ ತಯಾರಿಸಿಲ್ಲದಿರುವುದರಿಂದ ಅಧಿಕಾರಿಗಳ ಮೇಲೆಯೇ ಅನುಮಾನ ಮೂಡುವಂತೆ ಮಾಡುತ್ತಿದೆ. ಯಾವ ಮಿತಿಯಲ್ಲಿ ಈ ಸಮಸ್ಯೆಯನ್ನ ಬಗೆಹರಿಸಿ, ಬಡ್ತಿಯನ್ನು ನೀಡಲಾಗುವುದು ಎಂದು ಪ್ರಶ್ನೆ ಮಾಡಿದ್ದಾರೆ.

ಆಗ ಸಚಿವರು ಉತ್ತರ ಕೊಟ್ಟಿದ್ದು, ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಯಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಪದೋನ್ನತಿ ನೀಡುವ ಸಂಬಂಧ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆಯವರು ಪತ್ರಗಳಲ್ಲಿ ರಾಜ್ಯ ಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನ ತಯಾರಿಸಬೇಕಿದ್ದಲ್ಲಿ ಅನುಸರಿಸಬೇಕಾದ ಮಾನದಂಡಗಳ ಕುರಿತು ಸರ್ಕಾರದ ಆದೇಶದ ಅವಶ್ಯವಿರುವುದಾವಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *