ಬೆಂಗಳೂರು : ರಾಜ್ಯ ಸರ್ಕಾರವು ದೀಪಾವಳಿ ಹಬ್ಬದ ಪ್ರಯುಕ್ತ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಕೊಡುಗೆ ನೀಡಿದ್ದು, ಬಾಕಿ ಇರುವ ಮೂರು ಕಂತುಗಳ ಹಣವನ್ನು ಒಟ್ಟಿಗೆ ಬಿಡುಗಡೆ ಮಾಡಲು ಮುಂದಾಗಿದೆ. ಬೆಲೆ ಏರಿಕೆಯ ಬಿಸಿಯ ನಡುವೆ ಮಹಿಳೆಯರಿಗೆ ಇದು ದೊಡ್ಡ ರಿಲೀಫ್ ನೀಡಿದೆ.
ಈ ತಿಂಗಳು ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ಬಾಕಿ ಇರುವ ಮೂರು ಕಂತುಗಳ ಒಟ್ಟು ₹6,000 ಹಣ ನೇರವಾಗಿ ಜಮೆಯಾಗಲಿದೆ.
ಆಗಸ್ಟ್, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಬಾಕಿ ಇದ್ದ 34, 35 ಮತ್ತು 36ನೇ ಕಂತುಗಳ ಒಟ್ಟು ₹7,405.86 ಕೋಟಿ ರೂಪಾಯಿ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡುತ್ತಿದೆ.
ದೀಪಾವಳಿ ಹಬ್ಬದ ಸಂದರ್ಭದಲ್ಲೇ ಈ ಹಣವನ್ನು ಫಲಾನುಭವಿಗಳಿಗೆ ತಲುಪಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ಹಾಗೂ ಆದೇಶ ನೀಡಿದ್ದಾರೆ. ಯೋಜನೆಯಡಿ ಇದುವರೆಗೆ ಒಟ್ಟು 33 ಕಂತುಗಳ ಹಣ ಯಶಸ್ವಿಯಾಗಿ ಫಲಾನುಭವಿಗಳ ಖಾತೆ ತಲುಪಿದೆ. ಅಕ್ಟೋಬರ್ ತಿಂಗಳವರೆಗೆ ಈ ಯೋಜನೆಗಾಗಿ ಸರ್ಕಾರ ಒಟ್ಟು ₹86,838.36 ಕೋಟಿ ರೂಪಾಯಿ ಮೊತ್ತವನ್ನು ಪಾವತಿ ಮಾಡಿದೆ.










