ಹಳದಿ ಲೋಹ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಅದು ಬೆಲೆ ಏರಿಕೆಯಾಗುತ್ತಲೇ ಹೋದರೂ ಅದರ ಮೇಲಿನ ಮೋಹ ಮಾತ್ರ ಕಡಿಮೆಯಾಗುವುದೇ ಇಲ್ಲ. ಆಭರಣ ಪ್ರಿಯರಿಗೊಂದು ಗುಡ್ ನ್ಯೂಸ್ ಸಿಕ್ಕಿದೆ. ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ.
ಆಷಾಡ ಮಾಸದಲ್ಲಿ ಸಾಮಾನ್ಯವಾಗಿ ಯಾವುದೇ ಶುಭ ಕಾರ್ಯಗಳು ನಡೆಯುವುದಿಲ್ಲ. ಅದರಲ್ಲೂ ಮದುವೆ ಕಾರ್ಯಗಳಂತು ಜರುಗುವುದೇ ಇಲ್ಲ. ಈಗ ಆಷಾಡ ಕಳೆದು ಶ್ರಾವಣ ಮಾಸ ಬಂದಿದೆ. ಇನ್ನು ಮುಂದೆ ಮದುವೆ ಸೇರಿದಂತೆ ಶುಭ ಸಮಾರಂಭ ಶುರುವಾಗಲಿದೆ. ಇದಕ್ಕೆಲ್ಲ ಮುಖ್ಯವಾಗಿ ಆಭರಣಗಳೇ ಬೇಕಾಗುತ್ತದೆ. ಇಂದಿನ ಆಭರಣದ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,160 ರೂ., 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,150 ರೂ. ಇದೆ. ಜತೆಗೆ ಬೆಳ್ಳಿ ದರ 1 ಕೆಜಿಗೆ 76,000 ರೂ. ಆಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















